ತುಮಕೂರು:
ಜಿಲ್ಲೆಯಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದವರನ್ನು ಕಂಡಲ್ಲಿ ಗುಂಡಿಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಕೆಜೆ ಹಳ್ಳಿ ಡಿಜೆಹಳ್ಳಿ ಹಾಗೂ ಶಿವಮೊಗ್ಗದಂತಾಗುವುದು ಬೇಡ. ಸಾವರ್ಕರ್ ಫೆÇೀಟೋ ಹರಿದವರು ಪಾಪಿಗಳು. ಅವರನ್ನು ಕೂಡಲೇ ಬಂಧಿಸಬೇಕು. ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು. ಪಾಲಿಕೆಯವರು ಫ್ಲೆಕ್ಸ್ ತೆಗೆದುಹಾಕಿರುವುದು ತಪ್ಪು, ಆಯುಕ್ತರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಕ್ರೋಶ ಹೊರ ಹಾಕಿದರು.
ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ನಗರದ ಅಲ್ಲಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ ಗಳನ್ನು ಹಾಕಲಾಗಿತ್ತು. ಅದರಲ್ಲಿ ಸಾವರ್ಕರ್ ಭಾವಚಿತ್ರವೂ ಇತ್ತು. ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜಿನ ಮುಂಭಾಗ ಸಾವರ್ಕರ್ ಫೆÇೀಟೋ ಇದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಸೋಮವಾರ ರಾತ್ರಿ ಹರಿದು ಹಾಕಿರುವ ಸಂಗತಿ ಬೆಳಕಿಗೆ ಬಂದಿತ್ತು.
(Visited 1 times, 1 visits today)