ತುಮಕೂರು


ಮೈಸೂರಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರವರೆಗೆ ನಡೆಯಲಿರುವ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಪಾಲ್ಗೊಂಡು ಜಿಲ್ಲೆಯ ಕಲೆ, ಸಂಸ್ಕøತಿ, ಸಾಹಿತ್ಯ, ಸಂಗೀತ, ಇತಿಹಾಸ, ಪರಂಪರೆ ಪ್ರತಿಬಿಂಬಿಸುವ ಸ್ತಬ್ದಚಿತ್ರ ನಿರ್ಮಾಣ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬರುವ ಅಕ್ಟೋಬರ್ 5ರಂದು ನಡೆಯಲಿರುವ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯಲ್ಲಿರುವ ಕಲೆ, ವಾಸ್ತುಶಿಲ್ಪ, ಸಂಸ್ಕøತಿ ಬಿಂಬಿಸುವ ಉತ್ತಮ ಗುಣಮಟ್ಟ ಹಾಗೂ ಕಲಾತ್ಮಕವಾಗಿ ಮೂಡಿಬರುವಂತೆ ಸ್ತಬ್ದಚಿತ್ರ ತಯಾರಿಸಲು ಕ್ರಮವಹಿಸಬೇಕೆಂದು ನಿರ್ದೇಶನ ನೀಡಿದರು.
ಮೆರವಣಿಗೆಯಲ್ಲಿ ಭಾಗವಹಿಸಲು ಸ್ತಬ್ದಚಿತ್ರ ನಿರ್ಮಾಣ ಮತ್ತು ಮೇಲ್ವಿಚಾರಣೆಗಾಗಿ ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅತೀಕ್ ಪಾಷಾ, ಯೋಜನಾ ನಿರ್ದೇಶಕ ಜಿ.ಎಸ್.ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಮೀನುಗಾರಿಕೆ ಉಪನಿರ್ದೇಶಕ ಟಿ.ಎಸ್. ವಿಶ್ವನಾಥ, ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜು, ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕಿ ಸುಮನ್, ರೇಷ್ಮೆ ಸಹಾಯಕ ನಿರ್ದೇಶಕ ನಾಗೇಂದ್ರ, ಕೃಷಿ ಇಲಾಖೆಯ ಚಿದಾನಂದಸ್ವಾಮಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ತನಿಖಾಧಿಕಾರಿ ಕೆ.ಜೆ.ವರದರಾಜು, ತೋಟಗಾರಿಕೆ ಸಹಾಯಕ ನಿರ್ದೇಶಕಿ ಜ್ಯೋತಿ, ಪಶುವೈದ್ಯ ಸೇವಾ ಇಲಾಖೆಯ ಡಾ: ದಿವಾಕರ್, ಮತ್ತಿತರರು ಹಾಜರಿದ್ದರು.

(Visited 9 times, 1 visits today)