ತುಮಕೂರು:
ಮಕ್ಕಳ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಂಡಾಗ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪರಶಿವಮೂರ್ತಿ ತಿಳಿಸಿದರು.
ತಾಲ್ಲೂಕಿನ ದೇವಲಾಪುರ ಕ್ಲಸ್ಟರ್‍ನಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪಠ್ಯದಷ್ಟೇ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆಯೂ ಆಸಕ್ತಿ ಮೂಡಿಸಬೇಕು ಎಂದರು.
ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಮಕ್ಕಳು ಉಲ್ಲಾಸದಿಂದ ಶಿಕ್ಷಣ ಕಲಿಕೆಯಲ್ಲೂ ತೊಡಗುತ್ತಾರೆ ಎಂದು ಹೇಳಿದರು.
ಶಿಕ್ಷಕರು ಪಾಠದ ಜತೆಗೆ ಮಕ್ಕಳಿಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೂ ಪೆÇ್ರೀತ್ಸಾಹ ನೀಡಬೇಕು. ಹಾಗೆಯೇ ಪೆÇೀಷಕರು ಸಹ ಸಹಕಾರ ನೀಡಬೇಕು ಎಂದರು.
ಸಂಘದ ತಾಲ್ಲೂಕು ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳು ತಮ್ಮ ಪ್ರತಿಭೆಯಿಂದ ಉನ್ನತ ಮಟ್ಟಕ್ಕೇರಬಹುದು. ಈ ನಿಟ್ಟಿನಲ್ಲಿ ಎಲ್ಲ ಮಕ್ಕಳು ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ದೇವಲಾಪುರ ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಚಿಕ್ಕಣ್ಣ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಿಆರ್‍ಪಿ ಶಶಿಕಲಾ ಸ್ವಾಗತಿಸಿದರು.