ತುಮಕೂರು :
ಮಳೆ ಮತ್ತಿತರ ಕಾರಣಗಳಿಗೆ ಗುಂಡಿ ಬಿದ್ದಿರುವ ರಸ್ತೆಗಳು ಸರಾಗ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರು ವುದಲ್ಲದೆ, ಸಾವು, ನೋವುಗಳಿಗೆ ಕಾರಣವಾಗುತ್ತಿದ್ದು, ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆತಿಕ್ ಅಹಮದ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಕೂಗಳತೆಯ ದೂರದಲ್ಲಿಯೇ ಇರುವ ಕೋಡಿ ಬಸವೇಶ್ವರ ದೇವಾಲಯದ ಬಳಿ ಗುಂಡಿ ಬಿದ್ದಿರುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ನಂತರ ಮಾತನಾಡಿದ ಅವರು,ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ತುಮಕೂರು ನಗರದಲ್ಲಿ ಬಹುತೇಕ ರಸ್ತೆಗಳು ಗುಂಡಿಯಿಂದ ಕೂಡಿದ್ದು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದ್ದರು ಸಹ ಅಧಿಕಾರಿಗಳು ರಸ್ತೆ ಸರಿಪಡಿಸಲು ಮುಂದಾಗುತ್ತಿಲ್ಲ,ತುಮಕೂರು ನಗರದಲ್ಲಿ ಹಲವು ಬಡಾವಣೆಗಳಲ್ಲಿ ಸ್ಮಾರ್ಟ್‍ಸಿಟಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಸಾಕಷ್ಟು ಕಾಮಗಾರಿಗಳು ನಡೆಯುತ್ತಿದ್ದರು.ಬಹುತೇಕ ಕಾಮಗಾರಿಗಳು ಕಳಪೆ ಕಾಮಗಾರಿಗಳಿಂದ ಕೂಡಿವೆ ಇಂತಹ ಕಳಪೆ ಕಾಮಗಾರಿಗಳನ್ನ ಸಾರ್ವಜನಿಕರು ಸಹಿಸಲಾಗುತ್ತಿಲ್ಲ.ಕಳೆದ ಎರಡು ದಿನಗಳ ಹಿಂದೆ ತುಮಕೂರಿನ ಕೊಡಿ ಬಸವೇಶ್ವರ ವೃತ್ತದಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ ಇದರ ಜೊತೆಯಲ್ಲಿ ನಗರದ ಬಹುತೇಕ ರಸ್ತೆಗಳು ಹಾಳಾಗಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ ಇದರ ಜೊತೆಯಲ್ಲಿ ತುಮಕೂರು ನಗರದ ಹಲವು ಬಡಾವಣೆಗಳ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದರು.
ಇನ್ನು ತುಮಕೂರು ನಗರದ ಕುಣಿಗಲ್ ರಸ್ತೆ,ಮೆಳೆಕೋಟೆ ಮುಖ್ಯರಸ್ತೆ ,ಗುಬ್ಬಿಗೇಟ್ ರಸ್ತೆ ಅಮಾರಜ್ಯೊತಿ ನಗರ ಡಿ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ದುಸ್ಥಿತಿ ತಲುಪಿದ್ದು ಇಂತಹ ರಸ್ತೆಗಳನ್ನ ಸರಿಪಡಿಸುವಲ್ಲಿ ಅಧಿಕಾರಿಗಳು ಶಾಸಕರು ಹಾಗೂ ಸಂಸದರು ಮುಂದಾಗುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೋಡಿ ಬಸವೇಶ್ವರ ರಸ್ತೆಯಲ್ಲಿ ಪ್ರತಿದಿನ ಜಿಲ್ಲಾಧಿಕಾರಿಗಳು,ಸಿಇಓ,ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಹಾದು ಹೋಗಬೇಕು.ಮಳೆಯ ರಭಸಕ್ಕೆ ರಸ್ತೆಯ ಮಧ್ಯೆದಲ್ಲಿಯೇ ಆಳವಾದ ರಂದ್ರ ಆಗಿದೆ. ಅಧಿಕಾರಿಗಳು ಪೊಲೀಸ್ ಬ್ಯಾರಿಕೇಡ್ ಹಾಕಿ,ತಮ್ಮ ಅಸಾಹಯಕತೆ ವ್ಯಕ್ತಪಡಿಸಿರುವುದು ಕಂಡು ಬರುತ್ತಿದೆ. ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಸದರಿ ರಸ್ತೆಯನ್ನು ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಅತೀಕ್ ಅಹಮದ್ ತಿಳಿಸಿದರು.