ತುಮಕೂರು :
ಗುರು ಎನ್ನಿಸಿಕೊಂಡಿರುವವನು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕು. ಇದರ ಹಾದಿಯಲ್ಲಿ ಭಾರತದ ಸರ್ವಶ್ರೇಷ್ಠ ಶಿಕ್ಷಕರಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಸರ್ವಶ್ರೇಷ್ಠ ಇಂಜಿನಿಯರ್ ಭಾರತ ರತ್ನ ಪುರಸ್ಕøತ ವಿಶ್ವೇಶ್ವರಯ್ಯನವರು ಭಾರತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹಿಂದೂಸ್ತಾನ್ ಎರೋನಾಟಿಕ್ಸ್ ಲಿಮಿಟೆಡ್‍ನ ನಿರ್ವಹಣಾಧಿಕಾರಿ ಬಿ. ಕೃಷ್ಣಕುಮಾರ್ ನೆನೆದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಶಿಕ್ಷಕರ ಮತ್ತು ಇಂಜಿನಿಯರ್ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಬಿ. ಕೃಷ್ಣಕುಮಾರ್‍ವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ ಗಂಗಾಧರಯ್ಯರವರನ್ನು ನೆನೆದು ಸಮಾಜಕ್ಕೆ ಅವರ ಕೊಡುಗೆ ಅಪಾರ ಎಂದರು. ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಅವರ ಭವಿಷ್ಯ ರೂಪಿಸುವುದರೊಂದಿಗೆ ದೇಶದ ಭವಿಷ್ಯವನ್ನು ರೂಪಿಸಬಹುದಾಗಿದೆ. ಇಂದಿನ ದಿನದಲ್ಲಿ ಇಂಜಿನಿಯರಿಂಗ್ ವೃತ್ತಿ ಮೌಲ್ಯವು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಾಗಿ ಐಟಿ ವಲಯವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.
ನಗರ ಕೇಂದ್ರೀಯ ವಿದ್ಯಾಲಯದ ಮತ್ತು ರಾಷ್ಟ್ರ ಪ್ರಶಸ್ತಿ ಪುರಷ್ಕøತರಾದ ಜಿ ಪೊನಶಂಕರಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು. ಉತ್ತಮ ಶಿಕ್ಷಕಿಯಾಗಲು ಪೋಷಕರು ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆ ಎಂದರು. ಒಬ್ಬ ವ್ಯಕ್ತಿಯು ಉತ್ತಮ ಶಿಕ್ಷಕನಾಗಲು ಶ್ರಮಿಸುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಹೇಳಿಕೊಳ್ಳಲಾಗದÀ ಸಮಸ್ಯೆಯನ್ನು ಹೊಂದಿರುತ್ತಾರೆ. ಅದನ್ನು ಅರಿತು ಅವರಲ್ಲಿ ಒಬ್ಬರಾಗಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿದಾಗ ಮಾತ್ರ ಉತ್ತಮ ಶಿಕ್ಷಕನಾಗುತ್ತಾನೆ ಎಂದು ನೆರದಿದ್ದ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾಲಯದ ರಿಜಿಸ್ಟ್ರಾರ ಡಾ.ಎಂ.ಜೆಡ್ ಕುರಿಯನ್ ಮಾತನಾಡಿ, ಶಿಕ್ಷಕರು ತಮ್ಮ ವೃತ್ತಿ ಜೀವನದಲ್ಲಿ ವಿದ್ಯಾರ್ಥಿಗಳೊಂದಿಗೆ ಹೇಗೆ ವರ್ತಿಸಬೇಕು ಎಂದು ನೀತಿ ಕಥೆ ಹೇಳುವ ಮೂಲಕ ಶಿಕ್ಷಕರಿಗೆ ಸಲಹೆ ನೀಡಿದರು.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ ಮಾತನಾಡಿ, ಶಿವ ಮತ್ತು ಶಿಕ್ಷಕರಲ್ಲಿ ಶಿಕ್ಷಕನೇ ಶ್ರೇಷ್ಠ. ಜೀವನದಲ್ಲಿ ಭಯ ಭಕ್ತಿಯಿಂದ ಬದುಕುವುದನ್ನು ಶಿಕ್ಷಕರಿಂದ ಕಲಿಯಲು ಮಾತ್ರ ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಪಿಎಚ್‍ಡಿ ಪಡೆದ ಶಿಕಕ್ಷರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಐಟಿ ಡೀನ್ ಡಾ.ಎಂ ಸಿದ್ದಪ್ಪ, ಡಾ.ಚಿದಾನಂದಮೂರ್ತಿ ಎಂ.ವಿ, ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಭಾಗಿಯಾಗಿದ್ದರು.