ಚೆನ್ನೈ:

       ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಪ್ರತಿಷ್ಠಿತ ರೇಲಾ ಆಸ್ಪತ್ರೆಗೆ ದಾಖಲಾಗಿರುವ ತುಮಕೂರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. 

      ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ನ ಪ್ರಖ್ಯಾತ ವೈದ್ಯರಾದ ಮಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜಿಎಸ್ ನ ಡಾ. ರವೀಂದ್ರ ಅವರ ಉಪಸ್ಥಿತಿಯಲ್ಲೇ ಶಸ್ತ್ರಚಿಕಿತ್ಸೆ ನಡೆದಿದೆ.

      ಮೇದೋಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗಲು 11 ಸ್ಟಂಟ್‍ಗಳನ್ನು ಅಳವಡಿಸಲಾಗಿದೆ. ಮೇದೋಜೀರಕ ಗ್ರಂಥಿಯಿಂದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಈ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರು ವುದರಿಂದ ಸಣ್ಣ ಪ್ರಮಾಣದ ಸರ್ಜರಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು.

      ಸದ್ಯಕ್ಕೆ ಶ್ರೀಗಳನ್ನು ಆಪರೇಶನ್ ಥಿಯೇಟರ್ ನಿಂದ ಐಸಿಯು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಸದ್ಯಕ್ಕೆ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು , ಭಕ್ತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ.

(Visited 17 times, 1 visits today)