ತುಮಕೂರು
ಕರುನಾಡ ವಿಜಯಸೇನೆ ತುಮಕೂರು ಜಿಲ್ಲಾ ಘಟಕದ ವತಿಯಿಂದ ಕರುನಾಡಿಗೆ ಕರ್ನಾಟಕ ಎಂದು ನಾಮಕರಣ ಮಾಡಿದ 50ನೇ ವರ್ಷದ ಸವಿನೆನಪಿಗಾಗಿ ನವೆಂಬರ್ 05 ಮತ್ತು 06 ರಂದು ಕರುನಾಡ ಸಾಂಸ್ಕøತಿಕ ಹಬ್ಬ ಎಂಬ ಶಿರ್ಷೀಕೆ ಅಡಿಯಲ್ಲಿ ಸಾಂಸ್ಕತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಸೇನೆಯ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಎರಡು ದಿನಗಳ ಕರುನಾಡ ಸಾಂಸ್ಕøತಿಕ ಹಬ್ಬದಲ್ಲಿ ನಾಡಿನ ಹಿರಿಯ ಸಾಹಿತಿಗಳು, ಕಲಾವಿದರು,ಚಲನಚಿತ್ರ ನಟ, ನಟಿಯರು ಹಾಗು ಸ್ಥಳೀಯ ರಾಜಕಾರಣಿಗಳು ಭಾಗವಹಿಸಲಿದ್ದಾರೆ ಎಂದರು.
ನವೆಂಬರ್ 05ರ ಶನಿವಾರ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಾಡಿನ ಹಿರಿಯ ಸಾಹಿತಿಯೊಬ್ಬರು ಭಾಗವಹಿಸ ಲಿದ್ದಾರೆ.ಇವರೊಂದಿಗೆ ಕನ್ನಡ ಭಾಷೆ,ನೆಲ,ಜಲ ವಿಚಾರವಾಗಿ ದುಡಿದ ಹಿರಿಯರನ್ನು ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಉದ್ಘಾಟನಾ ಕಾರ್ಯಕ್ರಮದ ನಂತರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನೇತೃತ್ವದಲ್ಲಿ ಹೆಸರಾಂತ ಗಾಯಕ, ಗಾಯಕಿಯರು, ಕಾಮಿಡಿ ಕಿಲಾಡಿಗಳ ಖ್ಯಾತಿಯ ಕಲಾವಿದರು ಗಾಯನ, ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್.ಎನ್.ದೀಪಕ್ ತಿಳಿಸಿದರು.
ನವೆಂಬರ್ 06ರ ಭಾನುವಾರ ನಡೆಯುವ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಾಹಿತಿಯೊಬ್ಬರು ಸಮಾರೋಪ ಭಾಷಣ ಮಾಡಲಿದ್ದಾರೆ.ವೇದಿಕೆ ಕಾರ್ಯಕ್ರಮದ ನಂತರ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ ಸಾರಥ್ಯದಲ್ಲಿ ಗಾಯಕರು,ಗಾಯಕಿಯರು ಗಾಯನ ಹಾಗೂ ಕಾಮಿಡಿ ಕಿಲಾಡಿಗಳ ಕಾರ್ಯಕ್ರಮದ ಕಲಾವಿದರುಗಳು ಹಾಸ್ಯರಸಾಯನ ಕಾರ್ಯಕ್ರಮ ಜರುಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಸೋಮಶೇಖರ್,ಜಿಲ್ಲಾ ಗೌರವಾಧ್ಯಕ್ಷ ಬಿ.ಬಿ.ಮಹದೇವಯ್ಯ, ರಾಜ್ಯ ಸಂಚಾಲಕ ರಂಜನ್, ರಾಜ್ಯ ಸಲಹೆಗಾರರಾದ ಡಾ. ಸಂದೀಪ್ ಕುಮಾರ್, ಜಿಲ್ಲಾ ಅಧ್ಯಕ್ಷ ಕೆ.ಅರುಣ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ್, ಹರೀಶ್,ಮಹಿಳಾ ಘಟಕದ ಅಧ್ಯಕ್ಷ ಯಾಸ್ಮಿನ್‍ತಾಜ್,ಜಿಲ್ಲಾ ಸಹಕಾರ್ಯದರ್ಶಿ ನಯನ, ಜಿಲ್ಲಾ ಉಪಾಧ್ಯಕ್ಷ ಮನ್ಸೂರ್, ಪವನ್ ಸೇರಿದಂತೆ ಹಲವರು ಭಾಗವಹಿಸಿದ್ದರು.