ತುಮಕೂರು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸಲಾಯಿತು.
ಕಟ್ಟಡ ಕಾರ್ಮಿಕರ ಬಸ್ ಪಾಸುಗಳನ್ನು ಆಯಾ ತಾಲ್ಲೂಕಿನ ಸ್ಥಳೀಯ ಶಾಸಕರಿಂದ ಅರ್ಹ ಫಲಾನುಭವಿಗಳಿಗೆ ಇತ್ತೀಚೆಗೆ ವಿತರಿಸಲಾಯಿತು. ತಿಪಟೂರು ಕ್ಷೇತ್ರದ ಶಾಸಕ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಹಾಗೂ ಮಧುಗಿರಿ ಶಾಸಕ ಎಂ.ವಿ. ವೀರಭದ್ರಯ್ಯ ಅವರು ತಮ್ಮ ಕ್ಷೇತ್ರದ ಕಾರ್ಮಿಕರಿಗೆ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಬಸ್ ಪಾಸುಗಳನ್ನು ವಿತರಿಸಿದರು.
ಹೆಚ್ಚಿನ ಸಂಖ್ಯೆಯ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಗ್ರಾಮೀಣ ಭಾಗದವರಾಗಿರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್. ಗಜೇಂದ್ರ ಕುಮಾರ್ ತಿಳಿಸಿದ್ದಾರೆ.