ತುಮಕೂರು

ಪರಿಶಿಷ್ಟ ಪಂಗಡದ ರಾಜ್ಯ ಮಟ್ಟದ ಬೃಹತ್ ಸಮಾವೇಶ ಬಳ್ಳಾರಿಯಲ್ಲಿ ನವಂಬರ್ 20ರಂದು ನಡೆಯಲಿದ್ದು, ಪೂರ್ವಬಾವಿಯಾಗಿ ತುಮಕೂರಿನ ಜಿಲ್ಲಾ ಮಟ್ಟದ ಸಮಾವೇಶವನ್ನು ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ 28.10.2022 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು.

ಇವರು ಇಂದು ತುಮಕೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬ್ಬಲ್ ಇಂಜಿನ್ ಸರ್ಕಾರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇಕಡ 3 ರಿಂದ 7ಕ್ಕೆ ಏರಿಸಿದೆ. ಪರಿಶಿಷ್ಟ ಪಂಗಡಕ್ಕೆ ಭರಪೂರ ಸೌಲಭ್ಯಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಪರಿಶಿಷ್ಟ ಪಂಗಡದ ಜಾಗೃತ ಸಮಾವೇಶಗಳನ್ನು ಬಿಜೆಪಿ ಪ್ರತಿ ಜಿಲ್ಲೆಯಲ್ಲೂ ನಡೆಸುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ನಡೆಸಲಿರುವ ಪರಿಶಿಷ್ಟ ಪಂಗಡದ ಸಮಾವೇಶಕ್ಕೆ ಸಚಿವರಾದ ಬಿ.ಶ್ರೀರಾಮುಲು, ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಮಾಜಿ ಸಚಿವರಾದ ರಮೇಶ್ ಜಾರಕೀಹೊಳಿ, ರಾಜೂಗೌಡ, ಶಿವನಗೌಡ ನಾಯಕ್, ರಾಜ್ಯ ಎಸ್.ಟಿ.ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ರಾಜೇಶ್‍ಗೌಡ, ಮಸಾಲೆ ಜಯರಾಂ, ಚಿದಾನಂದ ಬಿ.ಗೌಡ, ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವರು, ಶಾಸಕರು ಮತ್ತು ವಿಧಾನಸಭೆ/ ವಿಧಾನಪರಿಷತ್ ಚುನಾವಣೆಗಳಿಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಇನ್ನು ಮುಂತಾದ ಪ್ರಮುಖರು ಭಾಗವಹಿಸಲಿದ್ದಾರೆ.
ಈ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ತುಮಕೂರು ಮತ್ತು ಮಧುಗಿರಿ ಜಿಲ್ಲೆಯ ಎಸ್.ಟಿ.ಮೋರ್ಚಾದ ಜಿಲ್ಲೆ ಹಾಗೂ ಮಂಡಲಗಳ ಪದಾಧಿಕಾರಿಗಳು, ಮಂಡಲ ಸಂಯೋಜಕರು, ಪರಿಶಿಷ್ಟ ಪಂಗಡದ ನಿಗಮ ಮಂಡಲಿ ಸದಸ್ಯರುಗಳು, ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ ಅಧ್ಯಕ್ಷರು, ಸದಸ್ಯರು, ನಿಕಟ ಪೂರ್ವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿರುತ್ತಾರೆ.
ವಾಲ್ಮೀಕಿ ಸಮಾಜದ ನಿರ್ಧಾರ ಬಿಜೆಪಿ ಸರ್ಕಾರ – ಬಿ.ಜಿ.ಕೃಷ್ಣಪ್ಪ ಈ ಸಂಧರ್ಭದಲ್ಲಿ ಮಾತನಾಡಿದ ತುಮಕೂರು ಮಹಾನಗರಪಾಲಿಕೆ ಮಾಜಿ ಮೇಯರ್ ಹಾಗೂ ಪರಿಶಿಷ್ಟ ಪಂಗಡದ ಹಿರಿಯ ಮುಖಂಡ ಬಿ.ಜಿ.ಕೃಷ್ಣಪ್ಪ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಶೇಕಡ 4ರಷ್ಟು ಹೆಚ್ಚು ಮೀಸಲಾತಿ ಪ್ರಮಾಣವನ್ನು ಘೋಷಿಸಿದ್ದು, ಪರಿಶಿಷ್ಟ ಪಂಗಡದ ಜನಾಂಗಕ್ಕೆ ಭಾರಿ ಕೊಡುಗೆಯನ್ನು ನೀಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ವಾಲ್ಮೀಕಿ ಜಯಂತಿಯನ್ನು ಸರ್ಕಾರದ ಭಾಗವಾಗಿ ಘೋಷಿಸಿ ರಜಾದಿನವಾಗಿ ಮಾಡಿದಲ್ಲದೆ, ತಮ್ಮ ಸಚಿವ ಸಂಪುಟದಲ್ಲಿ 4 ಜನ ಪರಿಶಿಷ್ಟ ಪಂಗಡದ ಶಾಸಕರಿಗೆ ಮಂತ್ರಿ ಸ್ಥಾನವನ್ನು ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 3 ರಿಂದ 7ಕ್ಕೆ ಏರಿಸಿದ್ದಾರೆ. ಪರಿಶಿಷ್ಟ ಪಂಗಡದವರು ಒಂದು ಘೋಷವಾಕ್ಯವಾದ “ವಾಲ್ಮೀಕಿ ಸಮಾಜದ ನಿರ್ಧಾರ : ಬಿಜೆಪಿ ಸರ್ಕಾರ” ಎಂದು ನಮ್ಮ ಸಮುದಾಯ ಮಾಡಿಕೊಂಡಿದ್ದು, ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡದ ಸಂಪೂರ್ಣ ಬೆಂಬಲವನ್ನು ಬಿಜೆಪಿ ಸರ್ಕಾರದ ರಚನೆಗೆ ನೀಡಲಿದೆ ಎಂದರು. ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಶ್ರೀಧರ, ಕಾರ್ಯದರ್ಶಿ ರಾಜ್‍ಕುಮಾರ್, ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷ
ವಿಜಯ್‍ಕುಮಾರ್, ತುಮಕೂರು ಮಹಾನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಜಿಲ್ಲಾ ವಕ್ತಾರ ಕೆ.ಪಿ.ಮಹೇಶ, ಜಿಲ್ಲಾ ಮಾಧ್ಯಮ ಪ್ರಮುಖ್ ಟಿ.ಆರ್.ಸದಾಶಿವಯ್ಯ, ಸಹ ಪ್ರಮುಖ್ ಜೆ.ಜಗದೀಶ್ ಉಪಸ್ಥಿತರಿದ್ದರು.

(Visited 1 times, 1 visits today)