ತುಮಕೂರು


ತುಮಕೂರು ಯುವ ಪೀಳಿಗೆ ದಿನೇ ದಿನೇ ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದು ಅದರಲ್ಲೂ ವಿದ್ಯಾರ್ಥಿಗಳು ಈ ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ ಹಾಗೂ ಇದನ್ನು ಬಳಸಿಕೊಂಡ ಮಾದಕ ದ್ರವ್ಯ ಸಾಗಾಣಿದಾರರು ಕಳ್ಳಸಾಗಣೆ ಮಾಡಿ ದೇಶದ ಯುವಶಕ್ತಿಗೆ ಮಾರಕವಾಗುತ್ತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿರುತ್ತದೆ ಎಂದು ತಾಜುದ್ದೀನ್ ಶರೀಫ ಹೇಳಿದರು.
ರಾಜ್ಯ ಗೃಹ ಇಲಾಖೆಗಳ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 16 ಡಗ್ ಪ್ರಕರಣಗಳು ಕಂಡುಬರುತ್ತಿದ್ದು, ಅದರಲ್ಲಿ ಮಾದಕ ವಸ್ತುಗಳ ಸೇವನೆ, ಸ್ವಾಧೀನ ಮತ್ತು ವ್ಯವಹರಗಳ ಪ್ರಕರಣಗಳು ದಾಖಲಾಗುತ್ತಿದೆ. ದೇಶದ ವಿವಿಧ ನಗರಗಳ 16 ರಿಂದ 20 ವರ್ಷದ ಸಾವಿರ ಯುವಕರಲ್ಲಿ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ಶೇ. 47 ಜನರು ಸಿಗರೇಟು ಸೇವಿಸುವುದಾಗಿದ್ದು, ಶೇ. 20 ಯುವಕರು ಮಾದಕ ದ್ರವ್ಯ ಸೇವಿಸಿದ್ದಾರೆ. ಅದರಲ್ಲಿ ಶೇ 83 ಯುವಕರಿಗೆ ಈ ಚಟದಿಂದ ಹೇಗೆ ಹೊರಬರಬೇಕೆಂದು ತಿಳಿದಿಲ್ಲ. ಇದು ಇಂದಿನ ಯುವಕರು ಅನುಭವಿಸುತ್ತಿರುವ ಒಂದು ಜ್ವಲಂತ ಸಮಸ್ಯೆಯಾಗಿದ್ದು, ಸಾಮಾಜಿಕ ಪಿಡುಗುಗಾಗಿ ಪರಿಣಮಿಸಿದೆ. ರಾಜಾರೋಷವಾಗಿ ನಮ್ಮ ಮಧ್ಯೆ ವ್ಯಾಪಿಸಿರುವುದು ದುರಂತವಾಗಿದೆ.
ಈ ಹಿನ್ನಲೆಯಲ್ಲಿ ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ಕರ್ನಾಟಕ ರಾಜ್ಯವು ಅಕ್ಟೋಬರ್ 10 ರಿಂದ ನವೆಂಬರ್ 10 ರ ತನಕ ‘’ ನೋ ಟು ಡ್ರಗ್ಸ್ ಮಾದಕ ವಿರೋಧಿ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಪ್ರಯುಕ್ತ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯಾದ್ಯಾಂತ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ, ಶಾಲಾ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ, ಸಾಮಾಜಿಕ ಜಾಲಾತಾಣದ ಮೂಲಕ ಜಾಗೃತಿ, ಸಂಘ ಸಂಸ್ಥೆಗಳ ಸಹಕಾರಗಳೊಂದಿಗೆ ಈ ಕುರಿತು ಸಂವಾದ, ಜಾಗೃತಿ ಜಾಥ, ಪೆÇೀಷಕರಿಗೆ ಕಾರ್ಯಗಾರ, ಶಿಕ್ಷಕರ ಕಾರ್ಯಗಾರ, ವಿದ್ಯಾರ್ಥಿಗಳಿಗೆ ಉಪನ್ಯಾಸ, ಭಿತ್ತಿ ಪತ್ರ ವಿತರಣೆ ಇಂತಹ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು, ಸಂಪೂರ್ಣ ಸಹಕಾರ ನೀಡ ಬೇಕೆಂದು ಈ ಮೂಲಕ ಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ಕರೆ ನೀಡುತ್ತದೆ.
ಸಾಲಿಡಾರಿಟಿ ಇದೇ ಡಿಸೆಂಬರ್ 18ರಂದು “ಭರವಸೆ-ಮರುನಿರ್ಮಾಣ-ಘನತೆ” ಎಂಬ ಧೈಯವಾಕ್ಯದಡಿ ರಾಜ್ಯಮಟ್ಟದ ಯುವ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದು, ಈ ಪ್ರಯುಕ್ತ ವಿವಿಧ ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ನಾಡಿನಾದ್ಯಂತ ನಡೆಯಲಿದೆ. ಇನಾಯೇತುಲ್ಲ ಅದ್ಯೆಕ್ಷರು… ಉಮರ್ ಫಾರೂಕ್ ಕಾರ್ಯದರ್ಶಿ ಮೌಲಾನ ಖಾಲಿದ್ ನದ್ವಿ..

(Visited 1 times, 1 visits today)