ತುಮಕೂರು


ತುಮಕೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಯೋಗಾನಂದ ಸಿ. ಅವರು ವರ್ಗಾವಣೆಗೊಂಡಿರುವ ಆಯುಕ್ತೆ ರೇಣುಕಾ ಅವರಿಂದ ಸೋಮವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ನೂತನ ಆಯುಕ್ತ ಯೋಗಾನಂದ್ ಮಾತನಾಡಿ, ಈ ಹಿಂದೆ ನಾನು ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಯುಕ್ತರಾಗಿ, ತುಮಕೂರು ಮಹಾನಗರ ಪಾಲಿಕೆಯಲ್ಲಿ ಉಪಆಯುಕ್ತರಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.
ಸರ್ಕಾರ ನನ್ನನ್ನು ತುಮಕೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದೆ. ಈ ಹಿಂದಿನ ಆಯುಕ್ತರಾದ ರೇಣುಕಾ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ನಾನು ಸಹ ಅದೇ ಮಾದರಿಯಲ್ಲಿ ಕಾರ್ಯನಿರ್ವಹಿಸಿಕೊಂಡು ಹೋಗುತ್ತೇನೆ ಎಂದರು.
ನಗರದ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಾಲಿಕೆ ಸದಸ್ಯರುಗಳ ಸಲಹೆ, ಸೂಚನೆ ಪಡೆದು ನಗರದ ಅಭಿವೃದ್ಧಿಗೆ ಶ್ರಮ ವಹಿಸಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.
ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಲು ಕಟಿಬದ್ಧನಾಗಿದ್ದೇನೆ. ನಗರದ ನಾಗರಿಕರಿಗೆ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿಕೊಂಡು ಹೋಗುತ್ತೇನೆ ಎಂದು ಅವರು ಹೇಳಿದರು.

(Visited 16 times, 1 visits today)