ತುಮಕೂರು


ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ಮತ್ತು ಅವಳಿ ಮಕ್ಕಳ ಸಾವಿನ ನಂತರ ಎಚ್ಚೆತ್ತಿರುವ ಸರ್ಕಾರ ಎಲ್ಲ ಆಸ್ಪತ್ರೆಗಳಿಗೂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಯಂತೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ. ದಾಖಲೆ ಇಲ್ಲ ಎಂದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ವೈದ್ಯಾಧಿಕಾರಿ, ಸಿಬ್ಬಂದಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು. ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ತುಮಕೂರಿನಲ್ಲಿ ಬಾಣಂತಿ ಮತ್ತು ನವಜಾತ ಶಿಶುವಿನ ಸಾವಿನ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರಂತೆ ಇನ್ನು ಮುಂದೆ ತುರ್ತು ಸಂದರ್ಭಗಳಲ್ಲಿ ತಾಯಿ ಕಾಡ್, ಆಧಾರ್‍ಕಾಡ್, ಪಡಿತರ ಕಾರ್ಡ್ ಯಾವುದೇ ದಾಖಲೆಗಳಿಲ್ಲದೆ ಚಿಕಿತ್ಸೆ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯಲ್ಲಿ 7 ಅಂಶಗಳನ್ನು ಹೇಳಿದ್ದು, ಅದರಂತೆ ತುರ್ತು ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿದೆ. ದಾಖಲೆ ಇಲ್ಲದಿದ್ದರೂ ಚಿಕಿತ್ಸೆ ನೀಡಬೇಕು, ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ನೋಡುವ ಅಗತ್ಯವಿಲ್ಲ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು.
ವೈದ್ಯರ ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

(Visited 5 times, 1 visits today)