ಗುಬ್ಬಿ

ರಾಜ್ಯದಲ್ಲಿ 2023ಕ್ಕೆ ಪೂರ್ಣ ಪ್ರಮಾಣದ ಬಹುಮತ ಪಡೆದು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತಂದೆ ತರುತ್ತೇನೆಂದು ಮಾಜಿಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು
ಗುಬ್ಬಿ ಪಟ್ಟಣದ ಜಿಲ್ಲಾ ಪಂಚಾಯ್ತಿಯ ಮಾಜಿ ಸದಸ್ಯ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಚಂದ್ರಶೇಖರ್ ಬಾಬು ರವರ ಮನೆಯ ಗೃಹ ಪ್ರವೇಶದ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲದ ಆ ಪಕ್ಷದ ನಾಯಕರುಗಳು ಊಹಾ ಪೆÇೀಹದ ಹೇಳಿಕೆ ಗಳನ್ನು ನೀಡಿ ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಇದರಿಂದ ಯಾವೊಬ್ಬ ಶಾಸಕನು ನಮ್ಮ ಪಕ್ಷದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದ ಆವರು ಭಾರತೀಯ ಜನತಾ ಪಕ್ಷ ಧಾರ್ಮಿಕ ನೆಲೆಗಟ್ಟು ಹಾಗೂ ಪಕ್ಷದ ಸಿದ್ಧಾಂತಕ್ಕೆ ಹೆಚ್ಚಿನ ಒತ್ತು ನೀಡುವ ಅಭ್ಯರ್ಥಿಗಳೇ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದರು. ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ ಮುಂಬರುವ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಮತ ದಾರರ ಸಮೀಕ್ಷೆ ಮಾಡಿಸಲು ಈಗಾಗಲೇ ತಯಾರಿ ನೆಡೆಸಿದ್ದು ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಿದರು ಅವರ ಪರವಾಗಿ ಪ್ರತಿಯೊಬ್ಬ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಅಭ್ಯರ್ಥಿ ಗೆಲ್ಲಿಸುವಲ್ಲಿ ಯಶಸ್ವಿಯಾಗಬೇಕೆಂದರು. ಕಾರ್ಯಕ್ರಮ ದಲ್ಲಿ ತುಮಕೂರು ನಗರ ಶಾಸಕ ಜಿ ಬಿ ಜ್ಯೋತಿಗಣೇಶ್, ಭಾ ಜ ಪ ಜಿಲ್ಲಾ ಅಧ್ಯಕ್ಷ ಹೆಬ್ಬಾಕ ರವಿಶಂಕರ್ , ಪಿಕಾಡ್ ಅಧ್ಯಕ್ಷ ಕೃಷ್ಣಕುಮಾರ್ , ಗುಬ್ಬಿ ಭಾಜಪ ಅಧ್ಯಕ್ಷ ಬಿ ಎಸ್ ಪಂಚಾಕ್ಷರಿ ಹಾಗೂ ಬಾಜಪದ ಮುಖಂಡರುಗಳು ಅಪಾರ ಸಂಖ್ಯೆಯಲ್ಲಿ ಬಿ ಎಸ್ ವೈ ಅಭಿಮಾನಿಗಳು ಭಾಗವಹಿಸಿದ್ದರು.

(Visited 9 times, 1 visits today)