ಬೆಂಗಳೂರು
ಮುಂದುವರಿದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ.ನಾಲ್ವರು ನ್ಯಾಯಾಧೀಶರು ಈ ಕಾಯ್ದೆಯ ಪರವಾಗಿ ವಾದಿಸಿದರು, ಮತ್ತೋರ್ವರು ವಿರುದ್ಧವಾಗಿ ವಾದಿಸಿದ್ದಾರೆ. ತೀರ್ಪನ್ನು ಓದಿದ ನ್ಯಾಯಾಧೀಶ ಮಹೇಶ್ವರಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10ರಷ್ಟು ಮೀಸಲಾತಿ ಒದಗಿಸುವುದಿಲ್ಲ ಸಂವಿಧಾನದ ಮೂಲ ರಚನೆ ಉಲ್ಲಂಘನೆಯಾಗಿದೆ ಎಂದು ಹೇಳಿದರು. ಮೀಸಲಾತಿ ನೀತಿಯನ್ನು ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರಾದ ತ್ರಿವೇದಿ ಮತ್ತು ಪಾರ್ದಿವಾಲಾ ಹೇಳಿದರು. ಆದಾಗ್ಯೂ, ನ್ಯಾಯಾಧೀಶರಾದ ಎಸ್. ರವೀಂದ್ರ ಭಟ್ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10ರಷ್ಟು ಮೀಸಲಾತಿಗೆ ವಿರೋಧವಿದೆ. ಪರಿಶಿಷ್ಟ ಜಾತಿ,