ತುಮಕೂರು


ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ತುಮಕೂರು ವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸರಳ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಮುರಳೀಧರ ಹಾಲಪ್ಪ ಅವರು, ವಿದ್ಯಾರ್ಥಿ ಜೀವನ ಒಂದು ಪವಿತ್ರವಾದ ನದಿ ಇದ್ದ ಹಾಗೆ ಅದರಲ್ಲಿ ಕಲ್ಲು, ಬಂಡೆ, ಏರು ಪೇರು, ಮುಳ್ಳು ಕಂಟಿಗಳು ಇರುತ್ತವೆ. ಅದರಂತೆ ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ಹಲವಾರು ಅಡೆ ತಡೆಗಳು, ಕಷ್ಟ ಕಾರ್ಪಣ್ಯಗಳು ಬಂದೇ ಬರುತ್ತವೆ. ಇವುಗಳನ್ನು ಎದುರಿಸಿ ಆತ್ಮಸ್ಥೈರ್ಯದಿಂದ ಮುಂದೆ ಬರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಮಾತನಾಡಿ, ಪತ್ರಿಕೋಧ್ಯಮ ವಿಭಾಗ ನಿರುದ್ಯೋಗ ಸೃಷ್ಠಿ ಮಾಡುವ ವಿಭಾಗವಲ್ಲ, ಅನ್ನ ಹುಟ್ಟಿಸಿಕೊಟ್ಟು ತನ್ನ ಕಾಲಮೇಲೆ ತಾನು ನಿಲ್ಲುವಂತಹ ಶಕ್ತಿಯನ್ನು ರೂಪಿಸಲಿದೆ ಎಂದು ಹೇಳಿದರು.
ತುಮಕೂರು ವಿವಿ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ವಿ.ಸಿಬಂತಿ ಪದ್ಮನಾಭ ಮಾತನಾಡಿ, ಮುರಳೀಧರ ಹಾಲಪ್ಪ ಅವರು ತಮ್ಮ ತಂದೆಯವರ ಹೆಸರಿನಲ್ಲಿ ಪತ್ರಿಕೋದÀ್ಯಮ ವಿಭಾಗದ ವಿದ್ಯಾರ್ಥಿಗಳಿಗಾಗಿ ತುಮಕೂರು ವಿವಿಯಲ್ಲಿ ಚಿನ್ನದ ಪದಕ ಸ್ಥಾಪಿಸಿದ್ದಾರೆ ಎಂದು ಹೇಳಿದರು.
ಕಳೆದ 5 ವರ್ಷಗಳಿಂದ ತುಮಕೂರು ವಿವಿ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು ರ್ಯಾಂಕ್ ಪಡೆದು ಚಿನ್ನದ ಪದಕ ಪಡೆಯುತ್ತಿರುವುದು ಸಂತಸ ತಂದಿದೆ. ಇದೇ ರೀತಿ ಇನ್ನೂ ಹೆಚ್ಚಿನ ಚಿನ್ನದ ಪದಕಗಳನ್ನು ಗಳಿಸುವಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕೆಂದು ಸಲಹೆ ನೀಡಿದರು.
2020 ರಲ್ಲಿ ಪತ್ರಿಕೋಧ್ಯಮ ವಿಭಾಗದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಶಿಪ್ನಾ ರೆಹಮಾನ್ ಮತ್ತು 2021-22ನೇ ಸಾಲಿನಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿ ಪ್ರಣವ್ ಅನಿರುದ್ಧ್ ಅವರನ್ನು ಮುರಳೀಧರ ಹಾಲಪ್ಪ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಈ ಇಬ್ಬರೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಮುಖಂಡರಾದ ರೇವಣಸಿದ್ದಯ್ಯ, ಮರಿಚನ್ನಮ್ಮ, ಸಂಜೀವ್ ಕುಮಾರ್, ನಟರಾಜ್, ಪ್ರಕಾಶ್, ಮಂಜುನಾಥ್, ಗೀತ, ಯುಕ್ತ ಕೌಶಲ್ಯ ಸಂಸ್ಥೆಯ ದಿಲೀಪ್, ದೀಪಿಕಾ, ತುಮಕೂರು ವಿವಿ ಪತ್ರಿಕೋಧ್ಯಮ ವಿಭಾಗದ ಪ್ರಾಧ್ಯಾಪಕಿ ಕೋಕಿಲ, ಸನ್ಮಾನಿತ ವಿದ್ಯಾರ್ಥಿಗಳ ಪೋಷಕರು ಸೇರಿದಂತೆ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಕಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 1 times, 1 visits today)