ತಿಪಟೂರು
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿರುವ ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿ ಆಯೋಜಿಸಿದ್ದ ನವಜಾಗರಣ ಕಲಾಕೃತಿ ಪ್ರದರ್ಶನಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಚಾಲನೆ ನೀಡಿ, ಮೆಚ್ಚುಗೆ ಸೂಚಿಸಿದರು.
ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ಯಾನ್ವಾಸ್ ಹಾಳೆಯ ಮೇಲೆ ಸಹಿ ಮಾಡುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದ ಡಿಕೆಶಿ, ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿರುವ ತಿಪಟೂರಿನ ಕಾಂಗ್ರೆಸ್ ಮುಖಂಡ ಟೂಡಾ ಶಶಿಧರ್ ಬೆನ್ನುತಟ್ಟಿದರು.
ದೇಶದಲ್ಲಿ ಸಾಮರಸ್ಯ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸುವ ಅಭಿಯಾನ ಅಂಗವಾಗಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ಒಗ್ಗಟ್ಟಿನಿಂದ ಬೆಂಬಲಿಸಿರುವ ರಾಜ್ಯದ ಸುಪ್ರಸಿದ್ಧ ಕಲಾವಿದರ ಕಲಾಕೃತಿಗಳು ಪ್ರದರ್ಶನದಲ್ಲಿರುವುದು ವಿಶೇಷ ಎನ್ನಿಸಿದೆ.
`ದಿ ರೆನೈಸನ್ಸ್’ ವರ್ಣಚಿತ್ರ ಮತ್ತು ಪೆÇೀಟೋಗ್ರಫಿಮೂಲಕ ಬೆಂಬಲಿಸಿ ವರ್ಣರಂಜಿತವಾಗಿಸುತ್ತಿರವ ನವಜಾಗರಣ ಕಲಾಕೃತಿ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಸಿಕೆಪಿ ಅಧ್ಯಕ್ಷ ಬಿ.ಎಲ್.ಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಮುಖಂಡರಾಡ ಡಾ.ಧ್ವಾಕರನಾಥ್, ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತಿತರರು ಇದ್ದರು.