ಗುಬ್ಬಿ
ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ. ಅವಶ್ಯಕತೆ ಇದ್ದು ಇದರ ಜಾರಿಗಾಗಿ ಡಿಸೆಂಬರ್ 11 ರಂದು ದಾವಣಗೆರೆ ಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಅಂದು ಅಲ್ಲಿ ಬೃಹತ್ ಸಮಾವೇಶ ನೆಡಯಲಿದೆ ಎಂದು ಮಾದಿಗ ದಂಡೋರದ ಜಿಲ್ಲಾ ಅಧ್ಯಕ್ಷ ಆಟೋ ಶಿವರಾಜು ತಿಳಿಸಿದರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ಪಾದಯಾತ್ರೆ ಕೈಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಮುದಾಯದ ಜನ ಭಾಗವಹಿಸಬೇಕು, ಸರಕಾರಗಳು ಬಂದು ಹೋಗುತ್ತಿವೆ ಆದರೆ ನಮ್ಮ ಸಮಸ್ಯೆಯನ್ನು ಮಾತ್ರ ಥಿಚಿಡಿu ಕೇಳುತ್ತಿಲ್ಲ ಹಾಗಾಗಿ ರಾಜ್ಯದ 45ಕ್ಕೂ ಹೆಚ್ಚು ಸಂಘಟನೆಗಳು ಒಂದುಗೂಡಿ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶ ಮಾಡಲಾಗುತ್ತಿದ್ದು ನಮ್ಮ ಸಮಸ್ಯೆಗಳಿಗೆ ಹಾಗೂ ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸದೆ ಹೋದರೆ ಬೃಹತ್ ಮಟ್ಟದ ಹೋರಾಟಕ್ಕೆ ನಾವು ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೆಂಗಳೂರು ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ರಾಪ್ಟೆ ನರಸಿಂಹಯ್ಯ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಈ ಒಂದು ಹೋರಾಟಕ್ಕೆ ನಮ್ಮ ಸಮುದಾಯದ ಎಲ್ಲಾ ಮುಖಂಡರುಗಳು ಹಾಗೂ ಜನಬಾಂಧವರು ಆಗಮಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಮಹಿಳಾ ಅಧ್ಯಕ್ಷ ಲಕ್ಷ್ಮಿದೇವಮ್ಮ ಮಾತನಾಡಿ ಹೆಣ್ಣು ಮಕ್ಕಳು ಸಮೇತರಾಗಿ ಸದಾಶಿವ ಆಯೋಗದ ಒಳ ಮೀಸಲಾತಿ ಕಲ್ಪಿಸುವಂತೆ ಹೋರಾಟವನ್ನು ನಿರಂತರವಾಗಿ ಮಾಡುತ್ತಿದ್ದು ನಮ್ಮ ಹೋರಾಟಕ್ಕೆ ಸರಕಾರ ಬೆಲೆ ಕೊಡದಿದ್ದರೆ ದಂಡತೆತ್ತ ಬೇಕಾಗುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಮಾದಿಗ ದಂಡೋರದ ಅಧ್ಯಕ್ಷ ಮನೋಹರ್, ಮುಖಂಡರಾದ ಗಂಗರಾಜು, ಶಿವಪ್ಪ, ಜಗದೀಶ್, ಚೇಳೂರು ಶಿವನಂಜಪ್ಪ, ರಾಜಪ್ಪ, ಶಿವರಂಗಪ್ಪ, ಬಸವರಾಜು, ಸೇರಿದಂತೆ ಇನ್ನಿತರರು ಹಾಜರಿದ್ದರು.