ತುಮಕೂರು :
ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲಾ ಒಂದು ರೀತಿಯ ಸುಪ್ತ ಪ್ರತಿಭೆಗಳು ಅಡಗಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್‍ಕುಮಾರ್ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕರ ಬಾಲಮಂದಿರ, ಸರ್ಕಾರಿ ಬಾಲಕಿಯರ ಬಾಲಮಂದಿರ ಇವರ ಸಂಯುಕ್ತಾಶ್ರಯದಲ್ಲಿ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಕೆಲಸ ಮಾಡಬೇಕಿದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜು ಸೇರಿದಂತೆ ಮತ್ತಿತರೆ ಅಧಿಕಾರಿ/ ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳು ಪಾಲ್ಗೊಂಡಿದ್ದರು.