ತುಮಕೂರು:
ಕಾರ್ಮಿಕ ಕಾನೂನುಗಳನ್ನು ಗಾಳಿಗೆ ತೂರಿ ಯಾವುದೇ ನೋಟಿಸ್ ನೀಡದೆ ಅಮಾನತುಗೊಳಿಸುವ ಮೂಲಕ ನೌಕರ ಆತ್ಮಹತ್ಯೆಗೆ ಯತ್ನಿಸಲು ಕಾರಣವಾದ ಬಳ್ಳಾರಿ ಜಿಲ್ಲೆಯ ತುಂಗಭದ್ರ ಪವರ್ ಪ್ರಾಜೆಕ್ಟ್ ಲಿಮಿಟೆಡ್ ಕಂಪೆನಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಕಾರ್ಖಾನೆಯ ಈ ಧೋರಣೆಯಿಂದಾಗಿ ಮನನೊಂದು ಅಮಾನತುಗೊಂಡಿರುವ ನೌಕರ ಹೂವಿನ ಹಡಗಲಿಯ ಸಂತೋಷ್ ಕುಮಾರ್ ಆತ್ಮಹತ್ಯೆ ಯತ್ನಿಸಿದ್ದು, ಸದ್ಯ ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ಜ್ಞಾನ ಪ್ರಕಾಶ್, ಸಂತೋಷ್‌ಕುಮಾರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿ, ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಈ ಬಗ್ಗೆ ದೂರು ದಾಖಲಿಸಿಕೊಂಡು ಕಾನೂನಾತ್ಮಕವಾಗಿ ಬಡ ನೌಕರನಿಗೆ ನ್ಯಾಯ ಒದಗಿಸಬಕು. ಅಲ್ಲದೇ ಅದೇ ಕಾರ್ಖಾನೆಯಲ್ಲಿ ಇವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಸದರಿ ಕಂಪೆನಿಯವರು ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯವ್ಯಾಪಿ ಕಾನೂನಾತ್ಮಕವಾಗಿ ಹೋರಾಟ ನಡೆಸಲು ನಮ್ಮ ಸಮಿತಿ ಸಿದ್ದವಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಮಹಿಳಾ ಉಪಾಧ್ಯಕ್ಷೆ ಜಯ ಪ್ರಕಾಶ್, ಮಹಮ್ಮದ್ ಕೌಸರ್, ವೆಂಕಟೇಶ್, ಯೋಗೇಶ್, ರವಿಕುಮಾರ್, ಲಕ್ಷ್ಮೀದೇವಿ, ಸರೋಜಾನಾಯ್ಕ, ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.