ಸುವರ್ಣಸೌಧದಲ್ಲಿ ಇಂದು ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಉಪ ನಾಯಕ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಬರ ನಿರ್ವಹಣೆ ಚರ್ಚೆಯ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ, ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ, ನಿವೃತ್ತಿ ಹೊಂದಿದ ನೌಕರರಿಗೆ ಸೌಲಭ್ಯಗಳನ್ನು ಮುಂದುವರೆಸಬೇಕೆಂದು ಸಲಹೆ ಮಾಡಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ 2004ರಲ್ಲಿ ಅಂದಿನ ಕೇಂದ್ರ ಸರ್ಕಾರ ಜಾರಿಗೆ ತಂದು ನೌಕರರಿಗೆ ಪಿಂಚಣಿ ರಹಿತ ವೇತನ ನೀಡುವ ಯೋಜನೆ ಜಾರಿಗೆ ತಂದಿತ್ತು. ಅದನ್ನು 2006ರಿಂದ ರಾಜ್ಯದಲ್ಲಿಯೂ ಜಾರಿ ಮಾಡಲಾಗಿತ್ತು ಎಂದು ಮಾಹಿತಿ ನೀಡಿ, ಈ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸಮಿತಿ ವರದಿ ಬಂದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ನೌಕರರ ಪ್ರತಿನಿಧಿಗಳ ಜೊತೆ ಸಚಿವರ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
(Visited 20 times, 1 visits today)