ತುಮಕೂರು
ಸಾಂಸ್ಕøತಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸನ್ನು ಅರಳಿಸುವಲ್ಲಿ ಸಹಕಾರಿಯಾಗಿವೆ. ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕೆಂದು ಎಂದು ಪತ್ರಿಕೋದ್ಯಮಿ ಎಸ್.ನಾಗಣ್ಣ ತಿಳಿಸಿದ್ದಾರೆ.
ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕರುನಾಡು ವಿಜಯ ಸೇನೆ ಆಯೋಜಿಸಿದ್ದ ಕರುನಾಡ ಸಾಂಸ್ಕøತಿಕ ಹಬ್ಬದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಚಲನಚಿತ್ರ,ಸಂಗೀತ ಕ್ಷೇತ್ರಗಳಲ್ಲಿ ಹೆಸರು ಮಾಡಿದಂತಹ ಮಹಾ ಕಲಾವಿದರ ಕಾರ್ಯಕ್ರಮಗಳನ್ನು ಟಿ.ವಿ.ಷೋಗಳಲ್ಲಿ ಮಾತ್ರ ನೋಡುತಿದ್ದೇವು. ಇಂದು ತುಮಕೂರಿನ ಜನ ನಿಜವಾಗು ನೋಡುವಂತಾಗಿರುವುದಕ್ಕೆ ಕರುನಾಡ ವಿಜಯಸೇನೆಯ ಅಧ್ಯಕ್ಷ ಹೆಚ್.ಎನ್.ದೀಪಕ್ ಹಾಗೂ ಅವರ ಪದಾಧಿಕಾರಿಗಳು ಕಾರಣ ಎಂದರು.
ಇತ್ತೀಚಿನ ದಿನಗಳಲ್ಲಿ ಖಾಸಗಿ ವಾಹಿನಿಗಳು ಪೈಪೋಟಿಯ ಮೇಲೆ ಸಂಗೀತ,ನೃತ್ಯ ರಿಯಾಲಿಟಿ ಷೋಗಳನ್ನು ನಡೆಸುತಿದ್ದಾರೆ.ಅವರಿಗೆ ಸರಿಸಮ ವೆಂಬಂತೆ ತುಮಕೂರಿನಲ್ಲಿ ಚಲನಚಿತ್ರ ಹಿನ್ನೆಲೆ ಗಾಯಕರು, ಹಾಸ್ಯ ಕಲಾವಿದರು, ನೃತ್ಯಗಾರರು ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ.ಇಂತಹ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ನಾವೆಲ್ಲರೂ ಪ್ರೋತ್ಸಾಹಿಸಬೇಕಿದೆ ಎಂದು ಎಸ್.ನಾಗಣ್ಣ ತಿಳಿಸಿದರು.
ಕಾರ್ಯಕ್ರಮದಲ್ಲಿ ಭುವನೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕ ಜೋತಿಗಣೇಶ್,ಕಳೆದ ಎರಡು ದಿನಗಳಿಂದ ಒಂದು ಉತ್ತಮ ಕಾರ್ಯಕ್ರಮ ನಡೆಯುತ್ತಿದೆ.ಪ್ರಾಯೋಜಕರು ಎಷ್ಟೇ ಇದ್ದರೂ ಇಂತಹದೊಂದು ಕಾರ್ಯಕ್ರಮ ಆಯೋಜಿಸುವುದು ತುಂಬಾ ಕಷ್ಟ.ಪಕ್ಷಾತೀತವಾಗಿ,ಜಾತ್ಯಾತೀತವಾಗಿ ಎಲ್ಲರ ವಿಶ್ವಾಸಗಳಿಸಿ,ಕಾರ್ಯಕ್ರಮ ವನ್ನು ಆಯೋಜಿಸಿದ್ದಾರೆ. ಸಂಗೀತ ರಸದೌತಣವನ್ನು ಎಲ್ಲರೂ ಸವಿಯಿರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರುನಾಡ ವಿಜಯಸೇನೆಯ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್ ಮಾತನಾಡಿ, ಸ್ಥಳೀಯ ಶಾಸಕರಾದ ಜೋತಿ ಗಣೇಶ್,ಸ್ಪೂರ್ತಿ ಡೆವಲಪರ್ಸ್‍ನ ಎಸ್.ಪಿ.ಚಿದಾನಂದ್,ಸಿದ್ದಾರ್ಥ್ ಅವರುಗಳು ಸಹಕಾರದಿಂದ ಈ ಕಾರ್ಯಕ್ರಮವನ್ನು ಇಷ್ಟೊಂದು ಅದ್ದೂರಿಯಾಗಿ ನಡೆಸಲಾಗುತ್ತಿದೆ.ಇದಕ್ಕೆ ಸಹಕಾರ ನೀಡಿದ ಜಿಲ್ಲಾ ಮತ್ತು ರಾಜ್ಯ ಪದಾಧಿಕಾರಿಗಳಿಗೆ ಹೃಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ.ರಾಜ್ ಇವೆಂಟ್ಸ್‍ನ ಸಹಕಾರದೊಂದಿಗೆ,ಹಲವರು ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ನಾನು ಅಭಾರಿಯಾಗಿದ್ದೇನೆ.ಕನ್ನಡ ಹಬ್ಬಕ್ಕೆ ಯಾವುದೇ ಜಾತಿ, ಧರ್ಮದ ಹಂಗಿಲ್ಲ. ಈ ಕರುನಾಡ ಸಾಂಸ್ಕøತಿಕ ಹಬ್ಬಕ್ಕೆ ಪ್ರತ್ಯೇಕ್ಷವಾಗಿ, ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ವೇದಿಕೆಯಲ್ಲಿ ಪಾಲಿಕೆ ಉಪಮೇಯರ್ ಟಿ.ಕೆ.ನರಸಿಂಹಮೂರ್ತಿ,ಪಾಲಿಕೆ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್, ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ,ವಿದ್ಯಾವಾಚಸ್ಪತಿ ಡಾ.ಕವಿತಾಕೃಷ್ಣ,ಕರುನಾಡ ವಿಜಯಸೇನೆಯ ರಾಜ್ಯ ಮುಖ್ಯ ಸಲಹೆಗಾರ ಡಾ.ಸುದೀಪ್,ರಾಜ್ಯ ಉಪಾಧ್ಯಕ್ಷ ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಂಜನ್, ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ,ಜಿಲ್ಲಾ ಗೌರವಾಧ್ಯಕ್ಷ ಬಿ.ಬಿ.ಮಹದೇವಣ್ಣ,ರಾಜ್ಯ ಯುವಘಟಕದ ಪ್ರಧಾನ ಕಾರ್ಯದರ್ಶಿ ಚಂದನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ಡಾ.ಕವಿತಾಕೃಷ್ಣ, ಶ್ರೀಮತಿ ಗಿರಿಜಾ ಧನಿಯಕುಮಾರ್, ಕೆ.ಎಸ್.ಸಿದ್ದಲಿಂಗಪ್ಪ, ಡಾ.ರಕ್ಷಿತ್,ಲೋಕೇಶ್ ಬಾಬು, ಡಾ.ಎಂ.ಜಗದೀಶ್‍ಗೌಡ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮದ ನಂತರ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರು ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.