ತುಮಕೂರು


ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.
ತುಮಕೂರು ವಿವಿ ಸಾವಯವ ರಸಾಯನಶಾಸ್ತ್ರ ವಿಭಾಗ ಹಾಗೂ ವಿವಿ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಆಧುನಿಕ ಸೌಲಭ್ಯಗಳಾದ ಡಿಜಿಟಲ್ ಲೈಬ್ರರಿ, ಉಚಿತ ವೈಫೈ ವ್ಯವಸ್ಥೆಯನ್ನು ಪೂರಕವಾಗಿ ಬಳಸಿಕೊಳ್ಳಬೇಕು. ಸುಸಜ್ಜಿತ ಸೌಲಭ್ಯಗಳ ಬಳಕೆ ಪ್ರತಿ ವಿದ್ಯಾರ್ಥಿಯ ಭವಿಷ್ಯವನ್ನು ಉತ್ತಮವಾಗಿ ರೂಪಿಸುತ್ತದೆ ಎಂದರು.
ಇಂದಿನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಡಾ. ವಿಷ್ಣು ಹೆಗಡೆ ಅವರ ಜೀವನ-ಸಾಧನೆ ಪ್ರತೀ ವಿದ್ಯಾರ್ಥಿಗೂ ಮಾದರಿಯಾಗಬೇಕು. ಕರಾವಳಿ ಭಾಗದ ಹಳ್ಳಿಯಿಂದ ಅಮೆರಿಕಾ ದೇಶವನ್ನು ರಸಾಯನಶಾಸ್ತ್ರ ಅಧ್ಯಯನದ ಮೂಲಕ ತಲುಪಿದ ಭಾರತದ ಪ್ರಜೆಯ ಬದುಕು ಇಂದಿನ ಯುವಪೀಳಿಗೆಯ ವಿದ್ಯಾಭ್ಯಾಸಕ್ಕೆ ದಾರಿದೀಪವಾಗಲಿದೆ ಎಂದರು.
ಅಮೇರಿಕದ ಅಡೆಸಿಸ್ ಇಂಕ್‍ನ ಗ್ರೂಪ್ ಲೀಡರ್ ಡಾ. ವಿಷ್ಣು ಹೆಗಡೆ ವಿಶೇಷ ಉಪನ್ಯಾಸ ನೀಡಿದರು.
ವಿ.ವಿ. ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಶೇಠ್ ಪ್ರಕಾಶ್ ಎಂ., ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಟಿ. ಎನ್. ರಮೇಶ್, ಸಾವಯವ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯೋಜಕ ಡಾ. ಸುರೇಶ್ ಡಿ., ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 1 times, 1 visits today)