ತುಮಕೂರು


ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಟೂಡೆಂಟ್ ಪೆÇಲೀಸ್ ಕೆಡೆಟ್ ಯೋಜನೆಯ ಸಾಂಕೇತಿಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಚಾಲನೆ ನೀಡಿದರು.
ಜಿಲ್ಲಾ ಪೆÇಲೀಸ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಟೂಡೆಂಟ್ ಕೆಡೆಟ್ ಯೋಜನೆಯ
ಸಾಂಕೇತಿಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಉದ್ಘಾಟಿಸಿದರು.
ತುಮಕೂರು ಜಿಲ್ಲೆಯಾದ್ಯಂತ 22 ಸರ್ಕಾರಿ ಪ್ರೌಢಶಾಲೆಗಳನ್ನು ಆಯ್ಕೆ ಮಾಡಿಕೊಂಡು 2022-23ನೇ ಸಾಲಿನ ಅನುದಾನದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪೆÇಲೀಸ್ ಉಪಾಧೀಕ್ಷಕರ ಮಟ್ಟದಲ್ಲಿ ಚಾಲನೆಗೊಳಿಸಲಾಗಿದೆ ಎಂದರು.
ಈ ಸಂಧರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 1 times, 1 visits today)