ತುಮಕೂರು


ಗ್ರಾಮೀಣ ಜನರ ಮನೆ ಬಾಗಿಲಿಗೆ ಅಧಿಕಾರಿಗಳು ತೆರಳಿ ಸಮಸ್ಯೆ ಆಲಿಸಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿ ಸರ್ಕಾರದ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸಿ ಕೊಡುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಜಿಲ್ಲಾಧಿಕಾರಿ ವೈ .ಎಸ್. ಪಾಟೀಲ್ ಹೇಳಿದರು.
ಜಿಲ್ಲೆಯ ಮಧುಗಿರಿ ತಾಲೂಕ್ ದೊಡ್ಡೇರಿ ಹೋಬಳಿಯ ಗಿಡದಾಗಲಹಳ್ಳಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಏರ್ಪಡಿಸಿದ್ದ” ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ”ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳ ಕುರಿತು ಗ್ರಾಮೀಣ ಜನತೆಗೆ ಅರಿವು ಮೂಡಿಸುವುದು ಜೊತೆಗೆ ಸೌಲಭ್ಯಗಳನ್ನು ಜನತೆಗೆ ತಲುಪಿಸಲು ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರು ಸರ್ಕಾರದ ಯೋಜನೆಗಳ ssಸೌಲಭ್ಯಗಳ ಪಡೆಯಲು ಕಚೇರಿಗಳಿಗೆ ಅಲೆಯುವುದರನ್ನ ತಪ್ಪಿಸಲು ಸರ್ಕಾರ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಜನರಿಗೆ ಕರೆ ನೀಡಿದರು.
ಆಶ್ರಯ ಯೋಜನೆ, ಪಹಣಿ ತಿದ್ದುಪಡಿ, ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಹಂಚಿಕೆ, ಪೆÇೀಡಿ ಪ್ರಕರಣ ಇತ್ಯರ್ಥ, ರಸ್ತೆ, ವಸತಿ ಸೌಲಭ್ಯ, ಹಾನಿಯಾದ ಮನೆಗಳಿಗೆ ಪರಿಹಾರ, ವಿದ್ಯುತ್ ಸಂಪರ್ಕ, ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಸುತ್ತಮುತ್ತಲಿನ ಗ್ರಾಮಸ್ಥರು ಸಲ್ಲಿಸಿದರು. ಸಾರ್ವಜನಿಕರ ಹತ್ತು ಹಲವು ಕುಂದುಕೊರತೆಗಳನ್ನು ಸಮಾಧಾನದಿಂದ ಆಲಿಸುತ್ತಾ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸ್ಥಳದಲ್ಲಿಯೇ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೀರಭದ್ರಯ್ಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ” ಕಾರ್ಯಕ್ರಮವು ಅತ್ಯಂತ ಉತ್ತಮವಾದ ಕಾರ್ಯಕ್ರಮವಾಗಿದ್ದು ಗ್ರಾಮ ಮಟ್ಟದಲ್ಲಿ ಜನರ ಅಲೆದಾಟವನ್ನು ತಪ್ಪಿಸಿ ಅವರಿಗೆ ಸ್ಥಳದಲ್ಲಿಯೆ ಪರಿಹಾರವನ್ನು ನೀಡುವಂತಹ ಕಾರ್ಯಕ್ರಮವಾಗಿದೆ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತವೇ ನಿಮ್ಮ ಬಳಿ ಬಂದಿದ್ದು, ಯಾವುದೇ ಸಮಸ್ಯೆ ಇದ್ದರೂ ಮುಕ್ತವಾಗಿ ನಮ್ಮ ಜೊತೆಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ, ನಿಮ್ಮ ಸಮಸ್ಯೆ ಆಲಿಸಲು ನಾವು ನಿಮ್ಮ ಊರಿಗೆ ಬಂದಿದ್ದೇವೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಮಾಹಿತಿಯನ್ನು ಶಾಸಕರು ನೀಡಿದರು
ಪ್ರಾಸ್ತಾವಿಕ ಭಾಷಣ ಮಾಡಿದ ಉಪ ವಿಭಾಗಾಧಿಕಾರಿ ರಿಷಿಆನಂದ್ ಅವರು ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಬೇಕು ಎನ್ನುವ ಸರಕಾರದ ಆಶಯದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಪ್ರತಿ ತಿಂಗಳ ಮೂರನೇಯ ಶನಿವಾರ ಅಯೋಜಿಸಲಾಗುತ್ತಿದೆ, ಗ್ರಾಮೀಣ ಭಾಗದ ಜನರಿಗೆ ಮಾಹಿತಿಯ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವಪೂರ್ಣವಾಗಿವೆ ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಪಡೆದಂತಹ ಪ್ರಜೆಯೂ ನಾಡಿಗೆ ಉತ್ತಮ ಪ್ರಜೆಯಾಗಿ ತನ್ನ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಜಿಲ್ಲಾಧಿಕಾರಿ ಒಂದು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯೇ ಅವರು ವಾಸ್ತವ್ಯ ಇದ್ದು, ಜನರ ಸಮಸ್ಯೆಗಳನ್ನು ಪರಿಹರಿಸುವುದೇ ಈ ಕಾರ್ಯಕ್ರಮದ ವಿಶೇಷತೆಯಾಗಿದ್ದು, ಸಾರ್ವಜನಿಕರಿಗೆ ಇಲಾಖೆಯ ಸವಲತ್ತುಗಳನ್ನು ನೇರವಾಗಿ ತಮ್ಮ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದ್ದು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಲು ತಿಳಿಸಿದರು,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿದರು.
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಹಾಗೂ ವಿವಿಧ ಅಧಿಕಾರಿಗಳು ಜನರ ಅಹವಾಲುಗಳನ್ನು ಆಲಿಸಿದರು, ನಂತರ ಗ್ರಾಮೀಣ ಪ್ರತಿಭೆಗಳ ಹಾಗೂ ಕಲೆಗೆ ಪೆÇ್ರೀತ್ಸಾಹಿಸಲು ಪೂರಕವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಮೀನುಗಾರಿಕೆ ಇಲಾಖೆಯಿಂದ ವಸ್ತುಪ್ರದರ್ಶನ ಮಳಿಗೆ: ಮೀನುಗಾರಿಕೆ ಇಲಾಖೆಯಿಂದ ಇಲಾಖೆ ಯೋಜನೆಗಳ ಹಾಗೂ ಮೀನುಗಾರಿಕೆ ಬಗ್ಗೆ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನದ ಮಳಿಗೆ ಸಾರ್ವಜನಿಕರ ಆಕರ್ಷಿಸಿತು, ಹಾಗೂ ಕೃಷಿ ಹೊಂಡಗಳ ಅನುಕೂಲ ಹೊಂದಿರುವ ರೈತರಿಗೆ ತಲಾ 250ರಂತೆ 10 ಜನ ಮೀನುಗಾರರಿಗೆ ಉಚಿತ ಮೀನು ಮರಿ ವಿತರಣೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಡಿಡಿಎಲ್‍ಆರ್ ಜಿಲ್ಲಾಧಿಕಾರಿ ಸುಜಯ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೇಮ ಟಿ.ಎಲ್.ಎಸ್, ರೇಷ್ಮೇ ಇಲಾಖೆಯ ಉಪನಿರ್ದೇಶಕರಾದ ರಾಮಕೃಷ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಮಹೇಶಬಾಬು, ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ, ಮುಖಂಡರಾದ ವಿಜಯ್, ಗ್ರಾಮ ಪಂಚಾಯತಿ ಸದ್ಯರು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಮುಖಂಡರುಗಳು, ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

(Visited 4 times, 1 visits today)