ತುಮಕೂರು
ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ತನ್ನ ಮುಂದಿನ ಭವಿಷ್ಯದ ಬಗ್ಗೆ ಕನಸನ್ನು ಕಂಡಾಗ ಅಂತಹ ವಿದ್ಯಾರ್ಥಿ ಯಶಸ್ಸನ್ನುಗಳಿಸುತ್ತಾನೆ. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಯಶಸ್ಸಿನ ಹಾದಿ ತಲುಪುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಸಮಯ ನೀಡಬೇಕು ಹಾಗೂ ಅದರ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‍ರವರು ತಿಳಿಸಿದರು.
ನÀಗರದ ಶಿರಾ ರಸ್ತೆಯ ಶ್ರೀದೇವಿ ಪದವಿ ಕಾಲೇಜು ಮತ್ತು ಶ್ರೀದೇವಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಶ್ರೀಆಗಮನ 2022 ಎಂಬ ಸ್ವಾಗತ ಸಮಾರಂಭವನ್ನುಇತ್ತೀಚಿಗೆ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಅಡಿಟೋರಿಯಂ ಸಭಾಂಗಣದಲ್ಲಿ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟಿಸಿದ್ದ ಬೆಂಗಳೂರಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರು, ಗಾಯಕರಾದ ಡಾ.ಅಕೈ ಪದ್ಮಶಾಲಿರವರು ಮಾತನಾಡುತ್ತಾ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಶ್ರೀದೇವಿ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ಎಂ.ಆರ್.ಹುಲಿನಾಯ್ಕರ್ ಹಾಗೂ ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಟ್ರಸ್ಟಿಯಾದ ಶ್ರೀಮತಿ ಅಂಬಿಕಾರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ತುಮಕೂರು ವಿದ್ಯಾರ್ಥಿನಿಯರ ಅಲ್ಯುಮಿನಿ ಹಾಗೂ ತಹಸೀಲ್ದಾರ್‍ರಾದ ಶ್ರೀಮತಿ ಕಾವ್ಯರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದಲೇ ವಿದ್ಯಾರ್ಥಿಗಳು ಗೆಲುವಿನ ಮೆಟ್ಟಿಲು ಏರಬಹುದು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯೆಂದು ಇದ್ದರೇ ಏನು ಬೇಕಾದರೂ ಸಾಧಿಸಬಹುದು ಹಾಗೂ ಉಜ್ವಲ ಭವಿಷ್ಯವನ್ನು ರೂಪಿಸಲು ಅವಶ್ಯಕವಾಗಿರುತ್ತದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಯಾವ ಯಾವ ರೀತಿಯಲ್ಲಿ ಪ್ರಾಮುಖ್ಯತೆ ನೀಡಬೇಕು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು, ಯು.ಪಿ.ಎಸ್.ಸಿ. ಮತ್ತು ಕೆ.ಪಿ.ಎಸ್.ಸಿ. ಪರೀಕ್ಷೆಗಳನ್ನು ಯಾವ ರೀತಿ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿಯಾದ ಟಿ.ವಿ.ಬ್ರಹ್ಮದೇವಯ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಹೆಚ್ಚು ಶ್ರಮ ವಹಿಸಿ, ಅತ್ಯುತ್ತಮ ಶ್ರೇಣಿಯ ರೀತಿಯಲ್ಲಿ ಮುಂಬರುವ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಶಿಕ್ಷಣ ಸಂಸ್ಥೆಯೂ ಎಲ್ಲ ಅನುಕೂಲತೆಗಳನ್ನು ಕಲ್ಪಿಸುತ್ತಿದೆ. ಇವುಗಳನ್ನು ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಮುಬಾರಕ್‍ರವರು ಮಾತನಾಡಿತ್ತಾ ಪ್ರಸ್ತುತ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ತನ್ನ ಮುಂದಿನ ಭವಿಷ್ಯದ ಬಗ್ಗೆ ಕನಸನ್ನು ಕಂಡಾಗ ಅಂತಹ ವಿದ್ಯಾರ್ಥಿ ಯಶಸ್ಸನ್ನುಗಳಿಸುತ್ತಾನೆ. ವಿದ್ಯಾರ್ಥಿಗಳಿಗೆ ಸಮಯಪಾಲನೆ, ವಿದ್ಯಾರ್ಥಿಗಳ ಜವಾಬ್ದಾರಿ, ನೈಪುಣ್ಯತೆ, ಜೀವನದ ಮುಂದಿನ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಹಾಗೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರೊ. ಚಂದ್ರಿಕಾ, ಪ್ರೊ. ಅಷಿಯಾಭಾನು, ಪ್ರೊ.ಬಾಸ್ಕರ್, ಪ್ರೊ.ವತ್ಸಲ, ಪ್ರೊ. ಸಾರೀಯ ಖಾನಂ, ಪ್ರೊ. ರಾಘವೇಂದ್ರ ಜಟ್ಟಣ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.