ತುಮಕೂರು
ಸಂವಿಧಾನವು ಅನೇಕ ಜನರ ಪರಿಶ್ರಮದ ಪ್ರತಿಫಲವಾಗಿ ಅಂಗೀಕಾರವಾಗಿದ್ದು, ಸಂವಿಧಾನದ ಅರಿವು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಎಂದು ಉಪನ್ಯಾಸಕ ಅರುಣ್ ಕುಮಾರ್ ಪಿ. ತಿಳಿಸಿದರು.
ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು
ಸಂವಿಧಾನವು ನೂರಾರು ಜನರ ಪರಿಶ್ರಮದ ಪ್ರತಿಫಲವಾಗಿ ನವೆಂಬರ್ 26, 1949ರಂದು ಅಂಗೀಕಾರವಾಯಿತು. ಅಂದಿನಿಂದ ಈ ದಿನವನ್ನು ರಾಷ್ಟ್ರೀಯ ಕಾನೂನು ಎಂದು ಆಚರಿಸಲಾಗುತ್ತಿತು. 2015 ನವೆಂಬರ್ 26ರಿಂದ ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದೆ ಎಂದು ತಿಳಿಸಿ,ಇಂತಹ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದರು
ನಂತರ ಮಾತಾನಾಡಿದ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪೆÇ್ರ. ಹೆಚ್.ಎಸ್. ಬಸವರಾಜು ವಿದ್ಯಾರ್ಥಿಗಳಿಗೆ ಸಂವಿಧಾನದ ಮೂಲ ಧ್ಯೇಯೋದ್ಧೇಶಗಳು, ಸಂವಿಧಾನದ ರಚನೆಯ ಹಿನ್ನೆಲೆ, ಸಧೃಡ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಮತದಾನದ ಪ್ರಾಮುಖ್ಯತೆಯನ್ನು ಹೇಳುತ್ತಾ, ಸಂವಿಧಾನದ ಬಗ್ಗೆ ಗ್ರಹಿಸಿ ಪ್ರಜಾಪ್ರಭುತ್ವದಲ್ಲಿ ನಡೆಯುವ ಅನ್ಯಾಯ ದೌರ್ಜನ್ಯಗಳನ್ನು ಪ್ರಶ್ನಿಸುವ ಮೂಲಕ ಯುವ ಜನತೆ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ
ಪ್ರಾಂಶುಪಾಲರಾದ ಡಾ. ಶಿವಕುಮಾರ್ ಸಿ.ಜಿ. ಮಾತಾನಾಡಿ ಸಂವಿಧಾನದ ಆದರ್ಶ ತತ್ವಗಳನ್ನು ಇಂದಿನ ಯುವಜನತೆ ಅಳವಡಿಸಿಕೊಳ್ಳಬೇಕು. ಭಾರತ ದೇಶವು ವಿಶಾಲವಾದ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದು ಎಲ್ಲಾ ವರ್ಗದವರಿಗೂ ಅನ್ವಯವಾಗುವಂತಹ ಸಂವಿಧಾನವನ್ನು ಕೊಟ್ಟ ಕೀರ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಚಾಲಕರಾದ ಪ್ರದೀಪ್ ಜಿ, ಪ್ರಾಧ್ಯಾಪಕರುಗಳಾದ ಡಾ. ಶ್ರೀನಿವಾಸಪ್ಪ, ಡಾ. ಜ್ಞಾನದೇವ, ಡಾ. ಗೋವಿಂದರಾಯ, ಡಾ. ಶೇಖರ್ ಮತ್ತಿತರರು ಉಪಸ್ಥಿತರಿದ್ದರು.
(Visited 40 times, 1 visits today)