ತುಮಕೂರು


ರದ್ದಾಗಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಮುಂದುವರಿಸಲು ಮಧ್ಯಸ್ಥಿಕೆ ವಹಿಸುವಂತೆ ರಾಷ್ಟ್ರಪತಿಗಳನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಷರೀಫ್ ಹಾಗೂ ಜಂಟಿ ಕಾರ್ಯದರ್ಶಿ ಉಮರ್ ಫಾರೂಕ್ ಅವರು
ಜಿಲ್ಲಾಧಿಕಾರಿಗಳ ಮೂಲಕ ಮನವಿ ಮಾಡಿದ್ದಾರೆ.
ಅವರು ಮನವಿ ಪತ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿವೇತನ ಪೆÇೀರ್ಟಲ್‍ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡಮಾಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಈ ವರ್ಷದಿಂದ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಕರ್ನಾಟಕ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದರು.
1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಆರ್ಟಿಇ ಅಡಿಯಲ್ಲಿ ಬರುವ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುತ್ತಿದ್ದು, ಅವರಿಗೆ ಸ್ಕಾಲರ್ಶಿಪ್ ನ ಅಗತ್ಯತೆ ಬೀಳುವುದಿಲ್ಲ ಹಾಗಾಗಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ, ಇದು ಆರ್ಟಿಇ ಕಾಯ್ದೆಯ ತಪ್ಪು ವ್ಯಾಖ್ಯಾನವಾಗಿದೆ, ಮೂಲಭೂತ ಹಕ್ಕಾದ ಆರ್‍ಟಿಇ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವ ಸ್ಕಾಲರ್ಶಿಪ್ ಅನ್ನು ಹೆಚ್ಚುವರಿ ಸವಲತ್ತು ಎಂಬಂತೆ ಬಿಂಬಿಸುವುದು ತಪ್ಪಾಗುತ್ತದೆ, ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಅದರ ಭಾಗವಾಗಿ ಸ್ಕಾಲರ್ಶಿಪ್ ಅನ್ನು ಜಾರಿಗೆ ತರಲಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕಾಗಿದೆ ಎಂದಿದ್ದಾರೆ.
ಆದ್ದರಿಂದ ಗೌರವಾನ್ವಿತ ರಾಷ್ಟ್ರಪತಿಗಳಲ್ಲಿ ವಿನಂತಿ ಮಾಡುವುದು ಏನೆಂದರೆ ತಾವು ಮಧ್ಯಸ್ಥಿಕೆ ವಹಿಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆಗುತ್ತಿರುವ ಈ ಅನ್ಯಾಯವನ್ನು ತಡೆಯಬೇಕೆಂದು ಈ ಮೂಲಕ ಕೋರಿದ್ದಾರೆ.

(Visited 1 times, 1 visits today)