ತುಮಕೂರು


ಪ್ರತಿಯೊಬ್ಬರೂ ಬದುಕಿನಲ್ಲಿ ಉನ್ನತ ಸ್ಥಾನಮಾನ ಗಳಿಸಲು ಶಿಕ್ಷಣ ಅತಿ ಮುಖ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು ತಿಳಿಸಿದರು.
ನಗರದ ಹೊರವಲಯದಲ್ಲಿರುವ ಪೆÇೀದಾರ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು. ಆಗ ಮಾತ್ರ ಪರಿಪೂರ್ಣ ಶಿಕ್ಷಣವಂತರಾಗಲು ಸಾಧ್ಯ ಎಂದರು.
ಶಾಲೆಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಕಲಿಸಬೇಕು. ಆಗ ಮಾತ್ರ ಉನ್ನತ ವ್ಯಾಸಂಗ ಮಾಡುವಾಗಲೂ ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮದ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೆÇೀದಾರ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೆÇ್ರೀತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.
ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಮಾತನಾಡಿ, ಶಾಲಾ ವಾರ್ಷಿಕೋತ್ಸವಗಳು ಮಕ್ಕಳಲ್ಲಿ ಸಾಂಸ್ಕೃತಿಕ, ಕ್ರೀಡಾ ಸ್ಫೂರ್ತಿ ಹೆಚ್ಚಿಸಲು ಸಹಕಾರಿ. ಹಾಗಾಗಿ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಪಾಠ ಪ್ರವಚನದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೂ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಪೆÇೀಷಕರು ಮಕ್ಕಳಿಗೆ ಪೆÇ್ರೀತ್ಸಾಹ ನೀಡಬೇಕು ಎಂದರು.
ಪೆÇೀದಾರ್ ಅಂತಾರಾಷ್ಟ್ರೀಯ ಶಾಲೆಯ ಪಠ್ಯಕ್ರಮ, ಮಕ್ಕಳಿಗೆ ಶಿಕ್ಷಣ ನೀಡುವ ಕ್ರಮ ಬಹಳ ಉಪಯುಕ್ತವಾಗಿದೆ ಎಂದು ಹೇಳಿದರು.ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೆÇೀದಾರ್ ಶಾಲೆ ಕೈಗೊಂಡಿರುವ ಕ್ರಮಗಳು ಪ್ರಶಂಸನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲರಾದ ಡಾ. ಲವ ಎಂ.ಬಿ. ಮಾತನಾಡಿ, ಮಕ್ಕಳನ್ನು ಜಾಗತಿಕ ಮಟ್ಟದಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡಲು ಪೆÇೀದಾರ್ ಶಾಲೆ ಶ್ರಮಿಸುತ್ತಿರುವ ಹಾದಿಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳು ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಹೊಸ ವರ್ಷದ ಆಚರಣೆಯ ಥೀಮ್ ಅನ್ನು ಆಧರಿಸಿ ಸಾಂಸ್ಕೃತಿಕ ಚಟುವಟಿಕೆ ಹಾಗೂ ಪರಿಸರ ಸಂರಕ್ಷಣೆ ನಮ್ಮ ಹೊಣೆ ಎಂಬ ನಾಟಕವನ್ನು ಪ್ರದರ್ಶಿಸುವ ಮೂಲಕ ಪರಿಸರದ ಮಹತ್ವ ಸಾರಿದರು.
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪೆÇೀದಾರ್ ಶಾಲೆಯ ಆಡಳಿತ ಮಂಡಳಿಯವರು, ಬೋಧಕ-ಬೋಧಕೇತರ ಸಿಬ್ಬಂದಿ, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ಶಾಲೆಯ ಮಕ್ಕಳಿಂದ ನಡೆದ ವಿವಿಧ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.

(Visited 6 times, 1 visits today)