ಕೋಲಾರ
ಶಿಕ್ಷಕರನ್ನು ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಎಂದು ಪೂಜಿಸುವ ನಾಡು ನಮ್ಮದು ಆದ್ರೆ ಇಲ್ಲೊಬ್ಬರು ಈ ಶಿಕ್ಷಕರ ವೃತ್ತಿಗೆ ಕಳಂಕ ತರುವ ಕೆಲಸ ಮಾಡಿದ್ದಾರೆ. ಪಾಠ ಮಾಡು ಅಂದ್ರೆ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಪ್ರಕಾಶ್ಎಂಬಾತ ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತಾಡಿಸಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಕೋಲಾರ ತಾಲ್ಲೂಕು ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್, ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತನಾಡುವುದು ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತೆ?ಅಲ್ಲದೇ 10ನೇ ತರಗತಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಕೇಳಿದ್ದಾನೆ ಎಂದು ಆರೋಪಿಸಲಾಗಿದ್ದು, ಕೂಡಲೇ ಶಿಕ್ಷಕನನ್ನು ಅಮಾನತು ಮಾಡಬೇಕೆಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.ಸಾಂದರ್ಭಿಕ ಚಿತ್ರವಿದ್ಯಾರ್ಥಿನಿ ಪೋಷಕರಿಂದ ದೂರುಕನ್ನಡ ಶಿಕ್ಷಕ ಪ್ರಕಾಶ್ ವಿರುದ್ದ ವಿದ್ಯಾರ್ಥಿನಿ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಣ್ಣಯ್ಯ ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ಶಿಕ್ಷಕ ಪ್ರಕಾಶ್ ಇದೇ ರೀತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಹಿನ್ನಲೆ ಅಮಾನತುಗೊಂಡಿದ್ದ.ಶಿಕ್ಷಕ ಪ್ರಕಾಶ್ ವರ್ತನೆಗೆ ಭಾರೀ ಆಕ್ರೋಶಆದರೂ ಪಾಠ ಕಲಿಯದ ಪ್ರಕಾಶ್, ಇದೀಗ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನೆ. ಶಿಕ್ಷಕ ಪ್ರಕಾಶ್ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಸೇವೆಯಿಂದ ಅಮಾನತು ಮಾಡುವಂತೆ ಪೋಷಕರು ಒತ್ತಾಯಿಸಿದ್ದಾರೆ.ಕೆಲ ದಿನಗಳ ಹಿಂದೆ ಹಾಸನದಲ್ಲೂ ನಡೆದಿತ್ತು ಘಟನೆಗುರುಗಳನ್ನು ಪೂಜ್ಯ ಭಾವದಲ್ಲಿ ಕಾಣ್ತಿವೆ. ಆದ್ರೆ ಅವರೇ ಭಕ್ಷಕರಾದ್ರೆ ಹೇಗೆ? ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಶಾಲೆಯ ಮುಖ್ಯ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕ ನರೇಂದ್ರನ್, 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿಬಂದಿತ್ತು.ವಿದ್ಯಾರ್ಥಿನಿಯ ಜೊತೆ ಅನುಚಿತ ವರ್ತನೆ
ಮುಖ್ಯ ಶಿಕ್ಷಕ ನರೇಂದ್ರನ್ ಪದೇ ಪದೇ ತಮ್ಮ ಕಚೇರಿಗೆ ಕರೆಸಿ ಕಸ ಗುಡಿಸಲು ಹೇಳುವುದರ ಜೊತೆಗೆ ವಿದ್ಯಾರ್ಥಿನಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೇ ಅರ್ಧವಾರ್ಷಿಕ ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಮತ್ತೇ ಕಚೇರಿಗೆ ಕರೆದು ಕೈ ಹಿಡಿದು ಮುತ್ತು ಕೊಡಲು ಮುಂದಾಗಿದ್ದ ಎನ್ನಲಾಗಿದೆ.
ಶಾಲೆಗೆ ಬಂದು ತರಾಟೆಗೆ ತೆಗೆದುಕೊಂಡ ಪೋಷಕರು
ಘಟನೆಯಿಂದ ನೊಂದ ವಿದ್ಯಾರ್ಥಿನಿ ಭಯದಿಂದ ಈ ವಿಷಯವನ್ನು ಪೋಷಕರಿಗೆ ಹೇಳದೇ ತನ್ನ ಕೆಲವು ಸಹಪಾಠಿಗಳೊಂದಿಗೆ ಈ ಬಗ್ಗೆ ಹೇಳಿಕೊಂಡಿದ್ದಾಳೆ. ನಂತರ ವಿದ್ಯಾರ್ಥಿನಿ ತನ್ನ ತಾಯಿ ಮತ್ತು ಚಿಕ್ಕಪ್ಪನಿಗೆ ವಿಷಯ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ಪೋಷಕರು ಮುಖ್ಯ ಶಿಕ್ಷಕನನ್ನು ಪ್ರಶ್ನಿಸಿ ಪೊಲೀಸ್ ಠಾಣೆಗೆ ಬರುವಂತೆ ಹೇಳಿದ್ದಾರೆ. ಠಾಣೆಗೆ ಬರಲು ನಿರಾಕರಿಸಿದ ನರೇಂದ್ರನ್ಗೆ ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.