ತುಮಕೂರು
ತುಮಕೂರು ವಿನಾಕಾರಣ ಪದೇಪದೇ ಕನ್ನಡಿಗರ ಮೇಲೆ ದಬ್ಬಳಿಕೆ ನಡೆಸುತ್ತಾ ಗಡಿ ವಿವಾದವನ್ನು ಕೆದುಕುತ್ತಿರುವ ಎಂಇಎಸ್ ಸಂಘಟನೆಯನ್ನು ವಿರುದ್ಧ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದಿಂದ ನಗರದ ಹೊರಪೇಟೆಯ ಗುಂಚಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಸೇರಿದ ನೂರಾರು ಮಂದಿ ಕರವೇ ಕಾರ್ಯಕರ್ತರು ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಎಂಇಎಸ್ ಪುಂಡರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಹಾಗೂ ಎಂಇಎಸ್ ಸಂಘಟನೆಯನ್ನು ನಿμÉೀಧಿಸಬೇಕೆಂದು ಆಗ್ರಹಿಸಿ ಎಂಇಎಸ್ ಮುಖಂಡರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಒತ್ತಡದಿಂದಲೇ ಕೇಂದ್ರ ಸರ್ಕಾರ ರಚಿಸಿದ ಮೆಹರ್ ಚಂದ್ ಮಹಾಜನ್ ಏಕ ಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕೆಂದು ತೀರ್ಪು ನೀಡಿದೆ ಆದರೂ ಸಹ ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮರಾಠಿಗರ ನಡುವೆ ಸಂಘರ್ಷ ನಿರ್ಮಾಣ ಮಾಡುವ ವಾತಾವರಣ ನಿರ್ಮಿಸುತ್ತಿದ್ದು. ಬೆಳಗಾವಿ ಗಡಿ ವಿವಾದ ಈಗ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಇಂತಹ ಸಂದರ್ಭದಲ್ಲಿ ಕಾನೂನಿಗೆ ಗೌರವ ನೀಡಿ ತೀರ್ಪಿಗಾಗಿ ಕಾಯುವ ಬದಲು ವಿನಾಕಾರಣ ವಿವಾದಗಳನ್ನು ಸೃಷ್ಟಿಸಿ ಮಹಾರಾಷ್ಟ್ರದಲ್ಲಿ ಕನ್ನಡಿಗರು ಮತ್ತು ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿ ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ನೇತೃತ್ವದಲ್ಲಿ ಮೊದಲಿನಿಂದಲೂ ಹೋರಾಟ ನಡೆಸುತ್ತಾ ಬಂದಿದ್ದು ಬೆಳಗಾವಿಯಲ್ಲಿ ಶಾಂತಿ ಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆಯನ್ನು ನಿμÉೀಧಿಸಬೇಕೆಂಬ ಒತ್ತಾಯವನ್ನು ಮಂಡಿಸುತ್ತಾ ಬಂದಿದೆ ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕನ್ನಡಿಗರ ರಕ್ಷಣೆಗೆ ರಾಜ್ಯದ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಇದೇ ರೀತಿ ಪ್ರಧಾನ ಮಂತ್ರಿಗಳು ಮಧ್ಯಪ್ರವೇಶ ಮಾಡಿ ಬೆಳಗಾವಿಯಲ್ಲಿ ಶಾಂತಿ ಕಟ್ಟಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಂಘಟನೆಯನ್ನು ಕೂಡಲೇ ನಿμÉೀಧಿಸಿ ಅದರ ಮುಖಂಡರುಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಮುಖಂಡರಾದ ಆನಂದ್ ಲೀಲಾವತಿ ಮಂಜುನಾಥ್ ಹಾಗೂ ವಿವಿಧ ತಾಲೂಕುಗಳ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.