ತುಮಕೂರು
ಶಿರಾ ನಗರದ ತಾಲೂಕು ಆಡಳಿತ ಕಚೇರಿ ಮಿನಿ ವಿಧಾನಸೌಧದ ಪಕ್ಕದಲ್ಲಿ ನೊಂದಣಿ ಮತ್ತು ಮುದ್ರಾಂಕ ಇಲಾಖೆಯವತಿಯಿಂದ ಸುಮಾರು 1.60 ಕೋಟಿ ವೆಚ್ಚದಲ್ಲಿ ಸರಕಾರ ತಾಲೂಕು ಸಬ್‍ರಿಜಿಸ್ಟಾರ್ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಆಡಳಿತ ಯಂತ್ರ ಸುಸೂತ್ರವಾಗಿ ನಡೆದುಕೊಂಡು ಹೋಗಲು ಎಲ್ಲಾ ರೀತಿಯ ಸಹಕಾರ ನೀಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಶಿರಾನಗರದ ಬುಕ್ಕಾಪಟ್ಟಣ ರಸ್ತೆಯ ತಾಲೂಕು ಆಡಳಿತ ಕಚೇರಿ ಮಿನಿ ವಿಧಾನಸೌಧದ ಸಮೀಪ ನಿರ್ಮಾಣಕ್ಕೆ ಉದ್ದೇಶಿಸಿರುವ ಸಬ್ ರಿಜಿಸ್ಟಾರ್ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತಿದ್ದ ಅವರು,ಇದು ಶಾಸಕರಾದ ಡಾ.ಎಂ.ಸಿ. ರಾಜೇಶಗೌಡ ಕೋರಿಕೆಯ ಮೇರೆಗೆ ಬಿಡುಗಡೆಯಾದ ಅನುದಾನದಲ್ಲಿ ನಿರ್ಮಿಸಲಿರುವ ಕಟ್ಟಡ.ಜನರಿಗೆ ಅನುಕೂಲವಾಗುವಂತೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ,ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಶಾಸಕರ ಕೋರಿಕೆಯಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಶಿರಾ ಶಾಸಕ ಡಾ.ಎಂ.ಸಿ.ರಾಜೇಶಗೌಡ ಒರ್ವ ಸಜ್ಜನ ರಾಜಕಾರಣಿ, ಸೌಮ್ಯ ಸ್ವಭಾವದ ಜೊತೆಗೆ, ಸರಳ ಸಜ್ಜನಿಕೆಗೆ ಹೆಸರಾದವರು. ಸರಕಾರದಿಂದ ಕ್ಷೇತ್ರದಲ್ಲಿ ಯಾವುದೆ ಕೆಲಸ ಕಾರ್ಯವಾಗಬೇಕಾದರೂ, ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಗಮನಕ್ಕೆ ತಂದು,ತ್ವರಿತವಾಗಿ ಕಾರ್ಯಕ್ರಮಗಳಿಗೆ ಅನುಮೋದನೆ ಪಡೆಯುವ ಕೆಲಸ ಮಾಡುತ್ತಾರೆ.ಸರಕಾರದ ಮುಂದೆ ಶಾಸಕರು ಇನ್ನೂ ಹಲವು ಬೇಡಿಕೆಗಳಿವೆ ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಾ ಶಾಸಕ ಡಾ.ಎಂ.ಸಿ.ರಾಜೇಶಗೌಡ ಮಾತನಾಡಿ,ದರು. ಕಾರ್ಯಕ್ರಮದಲ್ಲಿ ಎಂ.ಎಲ್‍ಸಿ ಡಾ.ಚಿದಾನಂದಗೌಡ, ಬೇವಿನಹಳ್ಳಿ ಮಂಜುನಾಥ್, ,ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತರಾದ ಡಾ.ಮಮತ ಉಪವಿಭಾಗಾಧಿಕಾರಿ ಅಜಯ್, ತಹಶೀಲ್ಧಾರ್ ತಿಪ್ಪೇಸ್ವಾಮಿಸಿ,ಹಿರಿಯ ನೊಂದಣಿ ಅಧಿಕಾರಿ ಕೆ.ಶಂಕರ್, ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ಪಟ್ಟಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.