ತುಮಕೂರು
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ 23ರಿಂದ ಎರಡು ದಿನಗಳ ಕಾಲ ಎಸ್.ಎಸ್.ಐ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್ ನರಸಿಂಹರಾಜು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಡಿ.23, 24 ರಂದು ಎರಡು ದಿನಗಳ ಕಾಲ ವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿವೆ, ಡಿಸೆಂಬರ್ 23ರ ಬೆಳಗ್ಗೆ ಎಸ್.ಎಸ್.ಐ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಪಂದ್ಯಾವಳಿ ಉದ್ಘಾಟನೆಗೊಂಡು 24ರ ಸಂಜೆ ಸಮಾರೋಪ ಜರುಗಲಿದೆ ಹಾಗೂ ಎರಡು ದಿನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ಇರಲಿವೆ, ಎಲ್ಲಾ ಕ್ರೀಡೆಗಳು ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತ ನೌಕರರೆಲ್ಲರಿಗೂ ಅವಕಾಶವಿದ್ದು, ಸರ್ಕಾರಿ ನೌಕರ ಕ್ರೀಡಾಪಟುಗಳು ಕಚೇರಿ ಮುಖ್ಯಸ್ಥರಿಂದ ಅವರ ಹೆಸರು, ಹುದ್ದೆ, ಸ್ಥಳ, ಇಲಾಖೆ, ಕೆ.ಜಿ.ಐ.ಡಿ ಸಂಖ್ಯೆ ವಿವರಗಳ ದೃಡೀಕರಿಸಲ್ಪಟ್ಟ ಪ್ರತಿಯೊಂದಿಗೆ ನೇರವಾಗಿ ಡಿಸೆಂಬರ್ 23ರ ಬೆಳಗ್ಗೆ 09-00 ಘಂಟೆಗೆ ಎಸ್.ಎಸ್.ಐ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಹಾಜರಿರಬೇಕು, ಅವರ ಈ ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಗುಂಪು ಮತ್ತು ವೈಯಕ್ತಿಕ ಸ್ಪರ್ಧೆ, ಅಥ್ಲೆಟಿಕ್ ಮತ್ತು ಗುಂಪು ಆಟಗಳು ಕ್ರೀಡೆಗಳು ಸೇರಿದಂತೆ ಒಟ್ಟು 20 ಕ್ರೀಡೆಗಳು ನಡೆಯಲಿವೆ, ಬಿಸಿಲಿನ ತಾಪ ತಣಿಯಲು ಕ್ಯಾಪ್ ನೀಡಲಾಗುವುದು, ಭಾಗವಹಿಸುವ ಕ್ರೀಡಾಪಟುಗಳಿಗೆ ಶುಚಿ ರುಚಿಯಾದ ಹಾಗೂ ಆರೋಗ್ಯಕರವಾದ ಉಪಹಾರ/ಊಟ, ಉತ್ತಮ ವೈದ್ಯಕೀಯ ವ್ಯವಸ್ಥೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಎರಡು ದಿನಗಳ ಕಾಲ ಒಒಡಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗಿದ್ದು, ಆಸಕ್ತ ನೌಕರರು ಕ್ರೀಡಾಕೂಟದಲ್ಲಿ ಸೌಹಾರ್ದಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.
ಪ್ರತಿನಿತ್ಯ ಕೆಲಸ-ಕಾರ್ಯಗಳ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ನೌಕರರು ಹಾಗೂ ಕಚೇರಿ ಸಿಬ್ಬಂಧಿಗಳು ತಮ್ಮ ಒತ್ತಡದ ಕೆಲಸದಿಂದ ಮುಕ್ತರಾಗಿ ಆಟೋಟಗಳಲ್ಲಿ ಭಾಗವಹಿಸಿ, ಮನಸ್ಸಂತೋಷ ಕಂಡುಕೊಳ್ಳುವ ಸದುದ್ದೇಶದಿಂದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಲ್ಲದೇ ನೌಕರರಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆ ದೊರೆಯಲಿದೆ, ನಡೆಯುವ ಕ್ರೀಡೆಯಲ್ಲಿ ವಿಜೇತರಾದ ಹಾಗೂ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶಿಫಾರಸ್ಸು ಮಾಡಲಾಗುವುದು, ಆಟೋಟ, ಊಟೋಪಹಾರ, ವೇದಿಕೆ ನಿರ್ವಹಣೆ, ಮೇಲುಸ್ತುವಾರಿ, ಸ್ವಾಗತ ಸಮಿತಿ ಮುಂತಾದವುಗಳಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳನ್ನೊಳಗೊಂಡ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಡಿಸೆಂಬರ್ 23ರ ಬೆಳಗ್ಗೆ 10-30 ಘಂಟೆಗೆ ಎಸ್.ಎಸ್.ಐ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಶಿμÁ್ಟಚಾರದಂತೆ ಗಣ್ಯರನ್ನು ಆಹ್ವಾನಿಸಲಾಗಿದೆ, ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರಾದ ಜಿ.ಎಸ್.ಬಸವರಾಜು ಮಹಾನಗರ ಪಾಲಿಕೆಯ ಮಹಾಪೌರಾದ ಪ್ರಭಾವತಿ ಸುದೀಶ್ ಎಂ.ಎಲ್.ಸಿ ಡಾ.ಚಿದಾನಂದಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಪಿಎಸ್ ಷಡಾಕ್ಷರಿ ಸೇರಿದಂತೆ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್ ನರಸಿಂಹರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಘಟಕದ ಅಧ್ಯಕ್ಷ ಎನ್ ನರಸಿಂಹರಾಜು :9845354207 ಸಂಪರ್ಕಿಸಿ.