ಸಿರಾ

ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ದೊಡ್ಡಆಲದ ಮರದ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಇಂದು ಸಂಜೆ ನಡೆದಿದೆ.
ಮೃತರೆಲ್ಲರೂ ಬೆಂಗಳೂರಿನ ನಿವಾಸಿಗಳು ಎಂದು ತಿಳಿದು ಬಂದಿದೆ.
ಸಿಂಧನೂರಿನಲ್ಲಿ ನಡೆದ ಸ್ನೇಹಿತನ ಮದುವೆಗೆ ಬೆಂಗಳೂರಿನಿಂದ ಕಾರಿನಲ್ಲಿ ಇವರುಗಳು ತೆರಳಿದ್ದರು. ಇಂದು ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಮಾರ್ಗಮಧ್ಯೆ ದೊಡ್ಡಆಲದ ಮರದ ಬಳಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ. ಈ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕಾರು ಅತಿ ವೇಗವಾಗಿ ಚಲಿಸಿ ಚಾಲಕನ ನಿಯಂತ್ರಣ ತಪ್ಪಿರುವುದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮದುವೆ ಮುಗಿಸಿಕೊಂಡು ಬರುತ್ತಿದ್ದ ಕಾರಿನಲ್ಲಿ 6 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಕಳ್ಳಂಬೆಳ್ಳ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

(Visited 1 times, 1 visits today)
FacebookTwitterInstagramFacebook MessengerEmailSMSTelegramWhatsapp
FacebookTwitterInstagramFacebook MessengerEmailSMSTelegramWhatsapp