ತುಮಕೂರು


ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ನೌಕರರ ಒತ್ತಡವನ್ನು ಕಡಿಮೆ ಮಾಡಿ ಕೆಲಸದಲ್ಲಿ ಹುಮ್ಮಸ್ಸನ್ನು ಹೆಚ್ಚಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದರು.
ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಕುಣಿಗಲ್ ರಸ್ತೆಯ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ “ತುಮಕೂರು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ”ಯನ್ನು ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘವು ಸುಸಜ್ಜಿತವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಪ್ರತಿಯೊಬ್ಬ ಕ್ರೀಡಾಪಟುವು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ನರಸಿಂಹರಾಜು ಮಾತನಾಡಿ, 2023ರ ಫೆಬ್ರವರಿ ಮಾಹೆಯಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗುವುದು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಶ್ರದ್ಧೆ ಮತ್ತು ಛಲದಿಂದ ಭಾಗವಹಿಸಬೇಕು. ಆಗ ಗುರಿ ಮುಟ್ಟಲು ಸಾಧ್ಯ. ಕರ್ತವ್ಯ ನಿರ್ವಹಣೆಯಲ್ಲಿ ನೌಕರರಿಗೆ ಅನೇಕ ಒತ್ತಡಗಳಿದ್ದು, ಇದರಿಂದ ಸ್ವಲ್ಪ ಮಟ್ಟಿಗಾದರೂ ಹೊರ ಬರಲು ಕ್ರೀಡೆ ಸಹಾಯಕಾರಿಯಾಗಿದೆ. ಇದರಿಂದ ಒಬ್ಬ ನೌಕರನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗುತ್ತಾನೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ ವಾಡ್, ಉಪವಿಭಾಗಾಧಿಕಾರಿ ಅಜಯ್, ಯುವಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು, ತಹಶೀಲ್ದಾರ್ ಸಿದ್ದೇಶ್, ಮೋಹನ್ ಕುಮಾರ್, ವಾಲಿಬಾಲ್ ತರಬೇತುದಾರ ಪ್ರದೀಪ್ ಕುಮಾರ್, ದೈಹಿಕ ಶಿಕ್ಷಕ
ಬಿ.ಜಿ.ಸಂಜು ಸೇರಿದಂತೆ ಕ್ರೀಡಾಪಟುಗಳು ಉಪಸ್ಥಿತರಿದ್ದರು.

(Visited 3 times, 1 visits today)