ತುಮಕೂರು


ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಜಿದ್ದಾ ಜಿದ್ದಾ ಬಲ ಪ್ರದರ್ಶನ ಮಾಡುತ್ತಿದ್ದು, ಜಿಲ್ಲೆಯ 11ವಿಧಾನಸಭಾ ಕ್ಷೇತ್ರಗಳಲ್ಲೂ ಚುನಾವಣೆಯ ಕಣ ರಂಗೇರಿದೆ.
ತುಮಕೂರು ನಗರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಯನ್ನು ಘೋಷಣೆ ಮಾಡಿದ್ದು, ಉಳಿದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಅಭ್ಯರ್ಥಿ ಘೋಷಣೆಗೂ ಮುಂಚೆಯಿಂದಲೇ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಜನ ಸಂಪರ್ಕದಲ್ಲಿದ್ದು, ಜನರ ವಿಶ್ವಾಸಗಳಿಸುತ್ತಿದ್ದಾರೆ. ಇನ್ನು ಬಿಜೆಪಿಯಲ್ಲಿ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಟಿಕೇಟ್ ಗಾಗಿ ಭಾರಿ ಕಸರತ್ತು ನಡೆಸುತ್ತಿದ್ದಾರೆ.
ಇನ್ನು ಕಾಂಗ್ರೆಸ್ ನಿಂದ ಟಿಕೇಟ್ ಪಡೆಯಬೇಕೆಂದು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್, ಮಾಜಿ ಶಾಸಕ ಡಾ.ರಫೀಕ್ ಅಹಮದ್, ಇಕ್ಬಾಲ್ ಅಹಮದ್ ಮತ್ತು ಶಶಿ ಹುಲಿಕುಂಟೆ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಜೆಡಿಎಸ್ ನಿಂದ ಟಿಕೇಟ್ ವಂಚಿತರಾದ ಅಟ್ಟಿಕಾ ಗೋಲ್ಡ್ ಕಂಪನಿಯ ಬೊಮ್ಮನಹಳ್ಳಿ ಬಾಬು ಮಾಜಿ ಶಾಸಕರಾದ ಎಸ್.ಷಫಿ ಅಹಮದ್ ಅವರ ಮನೆಗೆ ಎರಡು ಭಾರಿ ಭೇಟಿ ನೀಡಿ ಚರ್ಚೆ ನಡೆಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿರುವುದು ಭಾರಿ ಕುತೂಹಲ ಮೂಡಿಸಿದೆ.
ಇದರ ಜೊತೆಗೆ ನಗರಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಾಂಗ್ರೆಸ್ ನ ನಯಾಜ್ ಅವರ ಮನೆಗೆ ಭೇಟಿ ನೀಡಿ ಚರ್ಚೆ ಮಾಡಿರುವುದೂ ಸಹ ಕುತೂಹಲ ಮೂಡಿಸಿದ್ದು, ಜೊತೆಗೆ ಇತ್ತಿಚಿಗೆ ದಲಿತ ಮುಖಂಡರ ಸಭೆಯನ್ನೂ ಸಹ ಇತ್ತೀಚೆಗೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು, ನಗರ ವಿಧಾನಸಭಾ ಕ್ಷೇತ್ರದಿಂದ ಬೊಮ್ಮನಹಳ್ಳಿ ಬಾಬು ಕಾಂಗ್ರೆಸ್ ಅಭ್ಯರ್ಥಿ ಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ ವಿವಿಧ ಪಕ್ಷಗಳ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮದೇ ಆದ ಪ್ರಚಾರದಲ್ಲಿ ಭರ್ಜರಿಯಾಗಿ ತೊಡಗಿಕೊಂಡಿದ್ದು, ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಕಾಂಕ್ಷಿ ಎನಿಸಿಕೊಂಡಿರುವ ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಟಸ್ಥರಾಗಿರುವುದು ನೋಡಿದರೆ ಅಟ್ಟಿಕಾ ಬಾಬು ಅಭ್ಯರ್ಥಿ ಯಾಗಲಿದ್ದಾರೆ ಎಂಬುದಕ್ಕೆ ಇತ್ತೀಚೆಗೆ ಮಾಜಿ ಶಾಸಕರಾದ ಎಸ್. ಷಫಿ ಅಹಮದ್ ಅವರ ಮನೆಗೆ ಎರಡು ಭಾರಿ ಚರ್ಚೆ ನಡೆಸಿದ್ದೇನೆ ಎಂದು ಹೇಳಿರುವುದು ಇದಕ್ಕೆ ಪುಷ್ಠಿ ನೀಡಿದೆ.
ಎಸ್.ಷಫಿ ಅಹಮದ್ ಅವರೂ ಸಹ ಭರವಸೆ ನೀಡಿದ್ದಾರೆ ಎಂದು ಹೇಳಿರುವ ಅಟ್ಟಿಕಾಬಾಬು ಕಾಂಗ್ರೆಸ್‍ನ ಮತ್ತೋರ್ವ ಮುಖಂಡರಾದ ನಗರಪಾಲಿಕೆ ಸದಸ್ಯರಾದ ನಯಾಜ್ ಮನೆಗೂ ಭೇಟಿ ನೀಡಿ ಚರ್ಚೆ ನಡೆಸಿದ್ದು, ಜೆಡಿಎಸ್‍ನ ಅಲ್ಪಸಂಖ್ಯಾತರ ಮುಖಂಡರಾದ
ಆಡಿಟರ್ ಸುಲ್ತಾನ್ ಮೆಹಮೂದ್ ಹಾಗೂ ಇತರೆ ಮುಸ್ಲೀಂ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದು, ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎನ್ನಲಾಗುತ್ತಿದೆ.
ಒಟ್ಟಾರೆಯಾಗಿ ನಗರದ ಕಾಂಗ್ರೆಸ್ ಕಾರ್ಯಕರ್ತರದಲ್ಲಿ ಅಭ್ಯರ್ಥಿಯ ಗೊಂದಲ ಸೃಷ್ಠಿಯಾಗಿದೆ ಎನ್ನುವುದರಲ್ಲಿ ಸಂಶಯವಿಲ್ಲ.

(Visited 3 times, 1 visits today)