ಮಧುಗಿರಿ
ತಾಲೂಕಿನ ದೊಡ್ಡೇರಿ ಹೋಬಳಿ ರಂಗಾಪುರ ಗ್ರಾಮ ಪಂಚಾಯಿತಿಯು 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಉತ್ತೇಜಿಸುವ ಉದ್ದೇಶದಿಂದ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದೆ.
ರಂಗಾಪುರ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಈ ಪಂಚಾಯತಿಯಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಡಿಜಿಟಲ್ ಗ್ರಂಥಾಲಯ, ಸುಸಜ್ಜಿತ ಸಭಾಭವನ ನಿರ್ಮಾಣ ವಾಗಿದ್ದು, ಕರೋನ ಸಂಕಷ್ಟ ಕಾಲದಲ್ಲಿ ಉತ್ತಮ ನಿರ್ವಹಣೆ ತೋರಿದ್ದಾರೆ. ಗ್ರಾಮಪಂಚಾಯತಿ ಮಟ್ಟದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗಿದೆ.
ನರೇಗಾ ಯೋಜನೆಯಡಿಯಲ್ಲಿ ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, 15 ನೇ ಹಣಕಾಸು ಯೋಜನೆಯಡಿಯಲ್ಲಿ ಗ್ರಾಮಗಳಲ್ಲಿ ಹೈಮಾಸ್ಟ್ ದೀಪಗಳ ನಿರ್ಮಾಣ, ಕೃಷಿ ಹೊಂಡ, ಗೋಕಟ್ಟೆ, ಸೋಕ್ ಪಿಟ್, ಕುರಿಶೆಡ್ ಗಳು, ದನದ ಕೊಟ್ಟಿಗೆ ಗಳನ್ನು ನಿರ್ಮಾಣ ಮಾಡಿ ಸಾರ್ವಜನಿಕ ರಿಗೆ ಅನುಕೂಲ ಕಲ್ಪಿಸಲಾಗಿದೆ. ಹಣಕಾಸು ಮತ್ತು ಕಡತಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗಿದೆ.
2022-23 ನೇ ಸಾಲಿನಲ್ಲಿ 2ನೇ ಹಂತದಲ್ಲಿ ಅಮೃತ ಗ್ರಾಮಪಂಚಾಯತಿ ಯೋಜನೆಗೆ ಆಯ್ಕೆಯಾಗಿದ್ದು,
ಸ್ವಚ್ಚತಾ ಅಭಿಯಾನದಡಿ ಐತಿಹಾಸಿಕ ಮರೆಮಡುಗು ಕಲ್ಯಾಣಿಯನ್ನು ಸ್ವಚ್ಚಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿದೆ.
ಗ್ರಾಮಪಂಚಾಯತಿ ವ್ಯಾಪ್ತಿಯ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಕಾಂಪೌಂಡ್ ಮತ್ತು ಆಟದ ಮೈದಾನ ನಿರ್ಮಾಣ, ಸೇರಿದಂತೆ ಸ್ಮಶಾನಗಳ ಅಭಿವೃದ್ಧಿ, ಎನ್.ಆರ್.ಎಲ್.ಎಮ್ ಶೆಡ್ ಗಳ ನಿರ್ಮಾಣ ಮಾಡಲಾಗಿದೆ.
ಪ್ರಸ್ತುತ ಅಮೃತ ಉದ್ಯಾನವನ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ.
ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಗ್ರಾಮಪಂಚಾಯತಿ ವತಿಯಿಂದ ದಿನದರ್ಶಿಕೆ ಪ್ರಕಟಿಸಿ ಮಾದರಿ ಎನಿಸಿದೆ.