ತುಮಕೂರು
ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಪರಮ ಪೂಜ್ಯ
ಡಾ. ಶ್ರೀ. ಶ್ರೀ. ಶಿವಕುಮಾರಮಹಾಶಿವಯೋಗಿಗಳವರ 4ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ವನ್ನು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದಿನ 2ವರ್ಷಗಳಲ್ಲಿ ಕೋವಿಡ್-19ನಿಂದಾಗಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗಿತ್ತು. ಪ್ರಸಕ್ತ ವರ್ಷ ಪೂಜ್ಯರ ಸಂಸ್ಮರಣೋತ್ಸವವನ್ನು ದೊಡ್ಡಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸರ್ಕಾರವು ಹಿಂದಿನ ವರ್ಷ ಈ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸಿತ್ತು. ಸದ್ಭಕ್ತರು, ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ನಾಡಿನಾದ್ಯಂತ ಈ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುತ್ತಿದ್ದಾರೆ. ದಿನಾಂಕ:21.01.2023ರ ಶನಿವಾರ ಬೆಳಿಗ್ಗೆ 10.30ಗಂಟೆಗೆ ಸಮಾರಂಭವನ್ನು ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರು, ಮಾಜಿಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ಉದ್ಘಾಟಿಸಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಮಹಾಸಾಮೀಜಿಯವರ ದಿವ್ಯನೇತೃತ್ವ, ಬೆಂಗಳೂರು ಬೇಲಿಮಠದ ಅಧ್ಯಕ್ಷರಾದ ಶಿವಾನುಭವ ಚರಮೂರ್ತಿ ಪರಮಪೂಜ್ಯ ಶ್ರೀ ಶ್ರೀ ಶಿವರುದ್ರಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ಈ ಭವ್ಯ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಚಿವರುಗಳಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಅರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್, ಎಸ್.ಡಿ.ಸೋಮಶೇಖರ್, ಸಿ.ಸಿ.ಪಾಟೀಲ್, ಬಿ.ಸಿ.ನಾಗೇಶ್ ಭಾಗವಹಿಸಲಿದ್ದಾರೆ.
ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಸನ್ಮಾನ್ಯ ಭಗವಂತ ಖೂಬರವರು ಮತ್ತು ಸನ್ಮಾನ್ಯ ತೇಜಸ್ವಿ ಸೂರ್ಯ, ಲೋಕಸಭಾ ಸದಸ್ಯರು, ಬೆಂಗಳೂರು ದಕ್ಷಿಣ ಕ್ಷೇತ್ರ ಹಾಗೂ ಲೋಕಸಭಾ ಸದಸ್ಯರಾದ ಜಿ.ಎಸ್.ಬಸವರಾಜುರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ಜೆಡಿಎಸ್ ನಾಯಕರಾದ ಸನ್ಮಾನ್ಯ ಹೆಚ್.ಡಿ.ರೇವಣ್ಣನವರು, ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸಿ.ಗೌರಿಶಂಕರ್, ವಿಧಾನಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ್ ಎಂ ಗೌಡ, ತುಮಕೂರು ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ಶ್ರೀಮತಿ ಪ್ರಭಾವತಿ ಸುಧೀಶ್ವರ್‍ರವರು, ರಾಜೇಂದ್ರ ರಾಜಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯರು, ನಾಡಿನ ಹರಗುರುಚರಮೂರ್ತಿಗಳು ಹಾಗೂ ಗಣ್ಯಮಾನ್ಯರು ಭಾಗವಹಿಸುವರು.