ತುಮಕೂರು


ಪೋಲಿಸ್ಇಲಾಖೆ ಅತ್ಯಂತ ಜವಾಬ್ದಾರಿಯುತ ಇಲಾಖೆ. ಇಂತಹ ಪಾವಿತ್ರ್ಯತೆಯುಳ್ಳ ಇಲಾಖೆಯಲ್ಲಿ ಸದಾ ಕಾಲ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು.
ಇಲಾಖೆಯಲ್ಲಿ ಕಾರ್ಯನಿರ್ವಹಿಸುವಾಗ ಯಾವುದೇ ಟೀಕೆಗಳು ಬಂದರೂ ಅದನ್ನು ಋಣಾತ್ಮಕವಾಗಿ ತೆಗೆದುಕೊಳ್ಳದೇ ಸಕಾರಾತ್ಮಕವಾಗಿ ಪರಿಗಣಿಸಬೇಕು. ಬಡ, ಮಧ್ಯಮ ವರ್ಗದಿಂದ ಬಂದು ಪೆÇಲೀಸ್ ಇಲಾಖೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ನಾವು ಪೆÇಲೀಸ್ ಠಾಣೆಗಳಿಗೆ ಸಾರ್ವಜನಿಕರು ಬಂದಾಗ ಸೌಜನ್ಯದಿಂದ ಜನಸ್ನೇಹಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು.
ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ನಡೆದ ನಾಗರೀಕ ಮಹಿಳಾ ಪೆÇಲೀಸ್ ಪ್ರಶಿಕ್ಷಣಾರ್ಥಿಗಳ 12ನೇ ತಂಡದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆÇಲೀಸ್ ಠಾಣೆಗಳಿಗೆ ದೂರುಗಳನ್ನು ಹೊತ್ತು ಬಡವರು, ದೀನ ದಲಿತರು ಬಂದಾಗ ಅವರ ಕಷ್ಟವನ್ನು ನಿವಾರಿಸುವ ಗಂಭೀರ ಪ್ರಯತ್ನ ಮಾಡಬೇಕು ಎಂದರು.
ಮಹಿಳಾ ಸಬಲೀಕರಣ ಮಾಡಬೇಕಾದರೆ ನಮ್ಮನ್ನು ನಾವು ಸಶಕ್ತಗೊಳಿಸಬೇಕು, ವೃತ್ತಿ ಪರತೆಯಿಂದಲೇ ಮೆಚ್ಚುಗೆ ಗಳಿಸಬೇಕು. ಹಿರಿಯ ಅಧಿಕಾರಿಗಳು ಹಾಗೂ ಸಹದ್ಯೋಗಿಗಳ ಮೆಚ್ಚುಗೆಗೆ ಪಾತ್ರವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಭಾರತದ ಸಂವಿಧಾನದ ಶ್ರೇಷ್ಠವಾಗಿದ್ದು, ಸಮಾನತೆ, ಭ್ರಾತೃತ್ವ, ಜಾತ್ಯಾತೀತ ತತ್ವವನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪೆÇಲೀಸ್ ತರಬೇತಿ ಶಾಲೆಗೆ ಹೆಸರು ತರುವಂತೆ ಕಾರ್ಯನಿರ್ವಹಿಸುವ ಮುಖೇನ ನಿಮಗೆ ನೀವೇ ಗೌರವ ಸೃಷ್ಠಿಸಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್ ಮಾತನಾಡಿ, ಪ್ರಶಿಕ್ಷಣಾರ್ಥಿಗಳಲ್ಲಿ ಎಂಜಿನಿಯರಿಂಗ್ ಪದವಿ, ಸ್ನಾತಕೋತ್ತರ, ಸ್ನಾತಕ ಪದವೀಧರರು ಹೆಚ್ಚಿದ್ದು, ವಿದ್ಯಾವಂತ ಸಮೂಹ ಪೆÇಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಮುಂದಾಗಿರುವುದರಿಂದ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಲು ಸಹಾಯವಾಗಿದೆ ಎಂದರು. ಪ್ರಶಿಕ್ಷಾರ್ಥಿಗಳಿಗೆ ಈಜು, ಮಾರ್ಷಲ್ ಆರ್ಟ್ಸ್ ತರಬೇತಿ ನೀಡಲಾಗಿದೆ. ಈ ಮೂಲಕ ತನಿಖಾಧಿಕಾರಿ, ಸಹಾಯಕಾಧಿಕಾರಿ ಕೆಲಸ ಮಾಡುವಷ್ಟು ಪ್ರಶಿಕ್ಷಣಾರ್ಥಿಗಳು ತಯಾರಾಗಿದ್ದಾರೆ ಎಂದರು.
ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಮರಿಸ್ವಾಮಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಅಶ್ವಿನಿಗೆ ಸರ್ವೋತ್ತಮ ಪ್ರಶಸ್ತಿ 12ನೇ ತಂಡದ ಸರ್ವೋತ್ತಮ ಪ್ರಶಸ್ತಿಯನ್ನು ಪ್ರಶಿಕ್ಷಣಾರ್ಥಿ ಅಶ್ವಿನಿ ಪವಾರ್ ತಮ್ಮದಾಗಿಸಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ತರಬೇತಿ ಅವಧಿಯಲ್ಲಿ ಹೊರಾಂಗಣ, ಒಳಾಂಗಣ ಹಾಗೂ ಫೈರಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ನೀಡಿ ಪೆÇ್ರೀತ್ಸಾಹಿಸಲಾಯಿತು.
ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಪ್ರಶಿಕ್ಷಣಾರ್ಥಿಗಳು ಮತ್ತು ಪೆÇೀಷಕರು ಫೆÇೀಟೋ ಕ್ಲಿಕ್ಕಿಸಿಕೊಂಡ ದೃಶ್ಯಗಳು ಕಂಡು ಬಂದವು. ಕಾರ್ಯಕ್ರಮದಲ್ಲಿ ಪೆÇ್ರಭೆಷನರಿ ಐಪಿಎಸ್ ಅಧಿಕಾರಿ ಸಿದ್ಧಾರ್ಥ ಗೋಯೆಲ್, ಡಿವೈಎಸ್ಪಿಗಳಾದ ಶ್ರೀನಿವಾಸ್, ಪರಮೇಶ್, ಮತ್ತಿತರರು ಉಪಸ್ಥಿತರಿದ್ದರು.

(Visited 5 times, 1 visits today)