ತುಮಕೂರು
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧ ಬಿಜೆಪಿಯು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆಯನ್ನು ನಡೆಸುತ್ತಿದ್ದು, ಚುನಾವಣೆಯಲ್ಲಿ ಜನಾಶೀರ್ವಾದ ಪಡೆಯಲು ಇದೇ ಮಾರ್ಚ್ 18ರ ಶನಿವಾರ ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳು ನಡೆಯಲಿದೆ. ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರುಗಳ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಯು ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಗುಬ್ಬಿಯ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರುಗಳ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಯು ಮುಂದುವರೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು.
ಇವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಅಭಿವೃದ್ಧಿಯ ಮಂತ್ರ ಹಾಗೂ ಕೇಂದ್ರ ಮತ್ತು ರಾಜ್ಯ ಡಬ್ಬಲ್ ಇಂಜಿನ್ ಸರ್ಕಾರಗಳ ಸಾಧನೆ-ಯೋಜನೆ-ಕಾರ್ಯಕ್ರಮಗಳನ್ನು ವಿಜಯ ಸಂಕಲ್ಪ ಯಾತ್ರೆಯಲ್ಲಿ ತಿಳಿಸಲಾಗುವುದು ಎಂದರು.
ತಿಪಟೂರು, ಚಿಕ್ಕನಾಯಕನಹಳ್ಳಿ ಕಾರ್ಯಕ್ರಮ
ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಬೆಳಿಗ್ಗೆ 10.30ಕ್ಕೆ ತಿಪಟೂರು ಬಂಡಿಹಳ್ಳಿ ಗೇಟ್-ಎನ್.ಹೆಚ್ ರಸ್ತೆಯಿಂದ ಬೈಕ್ ರ್ಯಾಲಿಯಲ್ಲಿ 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದು. ನಂತರ ತಿಪಟೂರು ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ನಂತರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಕೆರೆಯಿಂದ ಮಧ್ಯಾಹ್ನ 01.30ಕ್ಕೆ 6 ಸಾವಿರ ಬೈಕ್ ರ್ಯಾಲಿ ನಡೆಯಲಿದ್ದು, ನಂತರ ಸಾರ್ವಜನಿಕ ಸಭೆ ನಡೆಯಲಿದೆ. ಈ ಎರಡು ಸಭೆಗಳಲ್ಲಿ ಜೆ.ಪಿ.ನಡ್ಡಾ ಹಾಗೂ ಬಿ.ಎಸ್.ಯಡಿಯೂರಪ್ಪನವರು ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅಭಿವೃದ್ಧಿಯ ಕಾರ್ಯಗಳ
ಆಧಾರದ ಮೇಲೆ ಜನರ ಬಳಿ ಮತಯಾಚನೆಯ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿಯ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಸಾಲೆ ಜಯರಾಮ್, ಡಾ|| ರಾಜೇಶ್‍ಗೌಡ, ಚಿದಾನಂದ ಎಂ.ಗೌಡ, ಎ.ನಾರಾಯಣಸ್ವಾಮಿ, ಪೂರ್ಣಿವi ಶ್ರೀನಿವಾಸ್, ಬಿಜೆಪಿಯ ರಾಜ್ಯ, ಜಿಲ್ಲೆ, ಮಂಡಲಗಳ ಪದಾಧಿಕಾರಿಗಳು, ಮಾಜಿ ಸಚಿವರು ಹಾಗೂ ಶಾಸಕರು, ಚುನಾಯಿತ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಹಿರಿಯ ಕಾರ್ಯಕರ್ತರು ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಗುಬ್ಬಿ ಕಾರ್ಯಕ್ರಮ
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಕಾರ್ಯಕ್ರಮವು ಸಂಜೆ 05.00 ಗಂಟೆಗೆ ಗುಬ್ಬಿಯ ಶ್ರೀ ನಾಗಲಿಂಗೇಶ್ವರ ದೇವಾಲಯದಿಂದ ಸುಭಾಷ್ ನಗರದವರೆಗೆ ರೋಡ್ ಶೋ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆದು ನಂತರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಸಭೆಯಲ್ಲಿ ಬಿ.ಎಸ್.ವೈ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಸಾಲೆ ಜಯರಾಮ್, ಡಾ|| ರಾಜೇಶ್‍ಗೌಡ, ಚಿದಾನಂದ ಎಂ.ಗೌಡ, ಎ.ನಾರಾಯಣಸ್ವಾಮಿ, ಪೂರ್ಣಿವi ಶ್ರೀನಿವಾಸ್, ಬಿಜೆಪಿಯ ರಾಜ್ಯ, ಜಿಲ್ಲೆ, ಮಂಡಲಗಳ ಪದಾಧಿಕಾರಿಗಳು, ಮಾಜಿ ಸಚಿವರು ಹಾಗೂ ಶಾಸಕರು, ಚುನಾಯಿತ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಹಿರಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೆಚ್.ಎಸ್.ರವಿಶಂಕರ್ ಹೆಬ್ಬಾಕ ಸವಿವರವಾಗಿ ಮಾಹಿತಿ ನೀಡಿ, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸಾರ್ವಜನಿಕರು ರ್ಯಾಲಿ ಹಾಗೂ ಸಭೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಹೆಚ್.ಟಿ.ಭೈರಪ್ಪ, ಉಪಾಧ್ಯಕ್ಷ ಹಾಗೂ ವಿಜಯ ಸಂಕಲ್ಪ ಯಾತ್ರೆಯ ಜಿಲ್ಲಾ ಸಂಚಾಲಕ ವೈ.ಹೆಚ್.ಹುಚ್ಚಯ್ಯ, ಸಹಸಂಚಾಲಕಿ ಹಾಗೂ ತಿಪಟೂರು ನಗರಸಭಾ ಸದಸ್ಯೆ ವಿ.ಸಂಧ್ಯಾಕಿರಣ್, ಜಿಲ್ಲಾ ವಕ್ತಾರ ಕೆ.ಪಿ.ಮಹೇಶ, ಸಹವಕ್ತಾರ ಟಿ.ಜೆ.ಸನತ್, ಮಾಧ್ಯಮ ಜಿಲ್ಲಾ ಸಂಚಾಲಕ ಟಿ.ಆರ್.ಸದಾಶಿವಯ್ಯ, ಸಹಸಂಚಾಲಕ ಜೆ.ಜಗದೀಶ್ ಉಪಸ್ಥಿತರಿದ್ದರು.