ತುಮಕೂರು
ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಗ್ಲಾಕೋಮಾ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ.ಎಂ. ಶ್ರೀದೇವಿ ಚಂದ್ರಿಕಾ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆಡಿಟೋರಿಯಂನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ “ವಿಶ್ವ ಗ್ಲಾಕೋಮಾ ಸಪ್ತಾಹ ದಿನಾಚರಣೆ” ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದ ಅವರು, ಪ್ರಸಕ್ತ ಸಾಲಿನ “ಅದೃಶ್ಯ ಗ್ಲಾಕೋಮಾವನ್ನು ಸೋಲಿಸೋಣ” ಘೋಷವಾಕ್ಯದ ಉದ್ದೇಶಗಳನ್ನು ಕುರಿತು ವಿವರಿಸಿದರಲ್ಲದೆ ತಲೆನೋವು ಹಾಗೂ ಕಣ್ಣಿನಲ್ಲಿ ನೋವು ಇದ್ದರೆ ಕೂಡಲೇ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ ವೀಣಾ ಮಾತನಾಡಿದರು. ಹಿರಿಯ ನೇತ್ರತಜ್ಞ ಡಾ. ಕೆ.ಆರ್ ಮಂಜುನಾಥ್ ಕಣ್ಣಿನ ಖಾಯಿಲೆಗಳನ್ನು ತಡೆಗಟ್ಟುವ ವಿಧಾನ, ನೇತ್ರದಾನದ ಪ್ರಕ್ರಿಯೆ ಕುರಿತು ಉಪನ್ಯಾಸ ನೀಡಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಕಚೇರಿಯ ಸಿಬ್ಬಂದಿಗಳಾದ ವಿರೂಪಾಕ್ಷಪ್ಪ, ನಾಗರಾಜು, ಜ್ಯೋತಿ, ಗೀತಾ, ಸ್ಪೂರ್ತಿ, ರಘು, ಅನಿಲ್, ಚಂದನ್ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ಭಾಗವಹಿಸಿದ್ದರು.