ತುಮಕೂರು:


ಡಬಲ್ ಎಂಜಿನ್ ಸರಕಾರ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿ,ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ತಾಲೂಕಿನ ಬಳ್ಳಗೆರೆ ಬಳಿ ನಡೆದ ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಭೇಟಿ ಬಜಾವೋ, ಭೇಟಿ ಪಡಾವೋ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ನಾರಿಶಕ್ತಿಯ ಅಭ್ಯುದಯಕ್ಕೆ ಕಂಕಣ ಬದ್ದರಾಗಿ ನರೇಂದ್ರಮೊದಿ ನೇತೃತ್ವದ ಸರಕಾರ ದುಡಿಯುತ್ತಿದೆ ಎಂದರು.
ರಾಜ್ಯದಲ್ಲಿ ಹೆಣ್ಣುಮಕ್ಕಳು ಕಡಿಮೆ ಆಗುತ್ತಿದ್ದಾರೆ ಎನ್ನುವುದನ್ನು ಗಮನಿಸಿ 2008 ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದರು.ಹೆಣ್ಣುಮಕ್ಕಳ ಬಗ್ಗೆ ಚಿಂತಿಸುವ ಸರಕಾರ ಎಂದರೆ ಅದು ಬಿಜೆಪಿ ಮಾತ್ರ, ಮೋದಿ ಸರಕಾರ ಉದ್ಯೋಗಸ್ಥ ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ಮಾಡಿದ್ದಾರೆ, ಆರೋಗ್ಯಕ್ಕಾಗಿ ಆಯುμÁ್ಮನ್ ಕಾರ್ಡ್ ಅನ್ನು ಜಾರಿಗೆ ತಂದಿದೆ.ಇಲ್ಲಿರುವ ಶಾಸಕರಿಗೆ ಜನರ ಆರೋಗ್ಯದ ಕಾಳಜಿ ಇದೆಯೋ ಇಲ್ಲವೋ ಗೊತ್ತಿಲ್ಲ, ಸುರೇಶ್ ಗೌಡರು ಶಾಸಕರಾಗಿದ್ದರೆ ಮನೆ ಮನೆಗೆ ಯೋಜನೆ ತಲುಪಿಸುತ್ತಿದ್ದರು,ದೇಶದ ಎಲ್ಲ ಮನೆಗಳಿಗೆ ನಲ್ಲಿ ನೀರು ಕೊಡಲು ಮೋದಿ ಅವರು ಗ್ರಾಮಾಂತರ ಕ್ಷೇತ್ರಕ್ಕೆ 150 ಕೋಟಿ ಅನುದಾನ ನೀಡಿದ್ದಾರೆ.ಕಳೆದ ಐದು ವರ್ಷಗಳಲ್ಲಿ ಅಭಿವೃದ್ದಿ ಎಂಬುದು ಶೂನ್ಯ.ಶಾಸಕರು ಇದ್ದಾರೋ ಇಲ್ಲವೋ ಎಂಬುದೇ ಜನರಿಗೆ ತಿಳಿಯದಾಗಿದೆ.ಕ್ಷೇತ್ರ ಮತ್ತೊಮ್ಮೆ ಅಭಿವೃದ್ದಿ ಕಾಣಬೇಕಾದರೆ ಸುರೇಶ್‍ಗೌಡ ಶಾಸಕರಾಗುವಂತೆ ನೀವೆಲ್ಲರೂ ಆಶೀರ್ವಾದ ಮಾಡಬೇಕೆಂದು ಶೋಭಾ ಕರಂದ್ಲಾಜೆ ಮನವಿ ಮಾಡಿದರು.


ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿ ಬಿ.ಸುರೇಶಗೌಡ ಮಾಡಿರುವ ಅಭಿವೃದ್ದಿ ಕಾರ್ಯಗಳು ಇಡೀ 224 ಕ್ಷೇತ್ರಗಳಿಗೂ ಮಾದರಿಯಾಗಿವೆ.ಎಲ್ಲಾ ಗ್ರಾಮಗಳಿಗೂ ರಸ್ತೆ,ಸಿಸಿ.ಚರಂಡಿಗಳನ್ನು ಮಾಡಿ,ಕ್ಷೇತ್ರವನ್ನು ಮಾದರಿಯಾಗಿದ್ದಾರೆ. ವಿದ್ಯುತ್ ಇಲಾಖೆಯಿಂದ 500 ಕೋಟಿ ರೂ ತಂದು,ರೈತರ ಎಲ್ಲಾ ಐಪಿ ಸೆಟ್‍ಗಳಿಗೆ ತಲಾ 25 ಕೆ.ವಿ.ಟಿ.ಸಿಗಳನ್ನು ಆಳವಡಿಸಿದ ಏಕೈಕ ಕ್ಷೇತ್ರ ತುಮಕೂರು ಗ್ರಾಮಾಂತರ.ಇದರ ರೂವಾರಿ ಸುರೇಶಗೌಡ ಎಂಬುದನ್ನು ನಾವ್ಯಾರು ಮರೆಯುವಂತಿಲ್ಲ ಎಂದರು.
ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಹೊನ್ನಾವರ-ಬೆಂಗಳೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಶೋಭಾ ಕರಂದ್ಲಾಜೆ ಕಾರಣ, ಈ ಯೋಜನೆಗೆ ಬಿಎಸ್ ವೈ ಅವರು ಬೆಂಬಲ ನೀಡಿದ್ದರಿಂದ ಇಂದು ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದರು.
ರಾಜ್ಯ ಮತ್ತು ರಾಷ್ಟ್ರದಲ್ಲಿ ಸುಭದ್ರ ಸರಕಾರ ತರಲು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು.ಸುರೇಶ್ ಗೌಡರು ಉತ್ತಮ ಕೆಲಸಗಾರರು.ದೆವ್ವದಂತೆ ಕೆಲಸ ಮಾಡುವ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ.ಮತ್ತೊಮ್ಮೆ ಗ್ರಾಮಾಂತರದಲ್ಲಿ ಕ್ರಿಯಾಶೀಲ ರಾಗಿರುವ ಸುರೇಶ್ ಗೌಡರು ಗೆಲ್ಲಿಸಬೇಕೆಂದು ಎಂದು ಮನವಿ ಮಾಡಿದರು.
ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ,ಕ್ಷೇತ್ರಗಳ ಅಭಿವೃದ್ದಿಯಲ್ಲಿ ನಮ್ಮೆಲ್ಲರಿಗೂ ಮಾದರಿ ಯಾಗಿದ್ದಾರೆ. ಮಂತ್ರಿಗಳು,ಅಧಿಕಾರಗಳ ಜೊತೆಗೆ ಜಗಳವಾಡಿ, ಕ್ಷೇತ್ರದ ಅಭಿವೃದ್ದಿಗೆ ಹಣ ತಂದಿದ್ದಾರೆ. ಅವರನ್ನುಮತ್ತೊಮ್ಮೆ ಕ್ಷೇತ್ರದ ಜನತೆ ಶಾಸಕರಾಗಿ ಮಾಡಿ, ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಸಹಕಾರಿಯಾಗಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಬಿ.ಸುರೇಶ್‍ಗೌಡ ಮಾತನಾಡಿ,
ನನ್ನ 10 ವರ್ಷದ ಅವಧಿಯಲ್ಲಿ ಕ್ಷೇತ್ರದ ಜನರಿಗೆ ಕುಡಿಯುವ ನೀರು,ರಸ್ತೆ, ಚರಂಡಿ, ಬೀದಿ ದೀಪ ಹಾಗೂ ಆರೋಗ್ಯ ಸೇವೆಗಳಿಗಾಗಿ ಆಸ್ಪತ್ರೆ ಮತ್ತು ಶಾಲೆಗಳನ್ನುನಿರ್ಮಿಸಿ ಕೊಡಲಾಗಿದೆ.ಮಹಿಳಾ ಶಕ್ತಿ ಒಂದಾಗಿ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದರೆ, ಇಡೀ ವಿಶ್ವವೇ ತುಮಕೂರು ಗ್ರಾಮಾಂತರ ಕ್ಷೇತ್ರದತ್ತ ತಿರುಗಿ ನೋಡುವಂತೆ ಅಭಿವೃದ್ದಿ ಕಾರ್ಯಗಳನ್ನು ಮಾಡಿ
ತೋರಿಸುತ್ತೇನೆ. ಕಾಂಗ್ರೆಸ್ ಸರಕಾರ ವಿದ್ದಾಗಲೂ ಸುಮಾರು 500 ಕೋಟಿ ರೂಗಳ ಅನುದಾನ ತಂದು ಕ್ಷೇತ್ರದ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ. ಆದರೆ ನನ್ನ ಕಾಲದಲ್ಲಿ ಅಭಿವೃದ್ದಿಗೊಂಡ ಶಾಲೆಗಳ ಶೌಚಾಲಯಗಳಿಗೆ ನೀರಿಲ್ಲ, ಬಳಕೆಗೆ ಯೋಗ್ಯವಿಲ್ಲ ದಂತಾಗಿವೆ.ಕಂಪ್ಯೂಟರ್ ಲ್ಯಾಬ್ ಉಪಯೋಗಕ್ಕೆ ಬರುತ್ತಿಲ.ನಾಗವಲ್ಲಿಯಲ್ಲಿ ಹೆಣ್ಣು ಮಕ್ಕಳ ಪ್ರಥಮದರ್ಜೆ ಕಾಲೇಜು ತೆರೆದು, ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಗುರಿ ಹೊಂದಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಅಂಬಿಕಾ ಹುಲಿನಾಯ್ಕರ್, ರೇಣುಕಮ್ಮ,ತಾರಾಮಣಿ, ಶಾರದ ನರಸಿಂಹಮೂರ್ತಿ, ಸುಮಿತ್ರಾದೇವಿ ಉಪಸ್ಥಿತರಿದ್ದರು.

 

(Visited 4 times, 1 visits today)