ತುಮಕೂರು


ನಗರದ ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಪಠ್ಯವಸ್ತು ಪುನರ್-ಮನನ ಕಾರ್ಯಾಗಾರವನ್ನು ತುಮಕೂರು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಉದ್ಘಾಟಿಸಿ ಮಾತನಾಡಿದರು.
ಸ್ನಾತಕ ಶಿಕ್ಷಣವು ಪದವಿ ಶಿಕ್ಷಣಕ್ಕಿಂತ ಭಿನ್ನವಾದ ಕೋರ್ಸ್ ಆಗಿದೆ. ಶಿಕ್ಷಣದ ಮಹತ್ವವನ್ನು ಅರಿಯಬೇಕು. ಪರೀಕ್ಷೆಗಳನ್ನು ಭಯಪಡದೇ ಧೈರ್ಯದಿಂದ ಎದುರಿಸಬೇಕು.
ಶಿಕ್ಷಣದಲ್ಲಿ ಸಮಸ್ಯೆಗಳು ಬೇರೆ ಕಡೆಯಿಂದ ಹುಟ್ಟುವುದಿಲ್ಲ. ನಮ್ಮಿಂದ ಸಮಸ್ಯೆಗಳು ಹುಟ್ಟುತ್ತವೆ. ಆ ಸಮಸ್ಯೆಗಳಿಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು. ಶಿಕ್ಷಣವನ್ನು ಬದುಕಿನ ಅಸ್ತ್ರವಾಗಿ ಬದಲಾಯಿಸಿಕೊಳ್ಳಬೇಕು ಎಂದರು.
ಸ್ನಾತಕ ಶಿಕ್ಷಣ ಅಧ್ಯಯನ ಮಂಡಳಿಯ ಅಧ್ಯಕ್ಷರಾದ ಡಾ.ಕೆ.ಎಸ್.ಸಿದ್ದರಾಜುರವರು ಮಾತನಾಡಿದರು. ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ.ಬಿ.ಎಸ್. ಲತಾ ರವರು ಮಾತನಾಡಿ, ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಉತ್ತಮ ಶಿಕ್ಷಣ ನೀಡಬೇಕು. ನಾವೆಲ್ಲರೂ ಒಟ್ಟಾಗಿ ಶಿಕ್ಷಣದ ಗುನಮಟ್ಟವನ್ನು ಸುಧಾರಿಸಲು ಪ್ರಯತ್ನಿಸೋಣ ಎಂದರು.
ಕಾರ್ಯಕ್ರಮದಲ್ಲಿ ಸ್ನಾತಕ ಶಿಕ್ಷಣ ಪರೀಕ್ಷಾ ಮಂಡಳಿ ಅಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮಿ ಎಸ್ ಹಾಗೂ ಜಿಲ್ಲೆಯ ಹದಿನಾರು ಸ್ನಾತಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರು, ಭೋದಕ ಮತ್ತು ಭೋದಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

(Visited 1 times, 1 visits today)