
. ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಗ್ರೀನ್ ಪಾತ್ ಹೋಟೆಲ್ ಮಲ್ಲೇಶ್ವರಂ ಬೆಂಗಳೂರು ಇಲ್ಲಿ ಆಯೋಜಿಸಿದ ಕರುನಾಡ ಕಲೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್. ರವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ಶಿಕ್ಷಣ, ಸಾಮಾಜಿಕ ಕ್ಷೇತ್ರಕ್ಕೆ ಗುರುತಿಸಿ ಪ್ರಶಸ್ತಿ ನೀಡಿ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಹೆಚ್. ಎಸ್. ಪ್ರತಿಮಾ ಹಾಸನ್. ರವರ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಸಾಹಿತಿಕ ಎಲ್ಲಾ ಕ್ಷೇತ್ರದ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಇವರಿಗೆ 9/03/2023ರಂದು ಗ್ರೀನ್ ಪಾತ್ ಹೋಟೆಲ್ ಬೆಂಗಳೂರು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಮ್ಮೆಯ ಕನ್ನಡತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸುಜ್ಞಾನ ಜ್ಞಾನಪೀಠದಿಂದ ಇತ್ತೀಚಿಗೆ ಇವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರು ಹಲವಾರು ರಾಜ್ಯ ಪ್ರಶಸ್ತಿ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಚಲನಚಿತ್ರ ಹಿರಿಯ ನಟಿ. ಮಾಲತಿ ಶ್ರೀ ರವರು ಮತ್ತು ಶ್ರೀ ಪರಮಪೂಜ್ಯ ಡಾ.ಮಹೇಶ್ವರ ಮಹಾಸ್ವಾಮಿಗಳು. ಮತ್ತು ಕಾರ್ಯಕ್ರಮದ ಆಯೋಜಕರಾದ ಡಾ. ಹೊರಪೇಟೆ. ಇನ್ನೂ ಹಲವಾರು ಮುಖ್ಯ ಅತಿಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಹೆಚ್. ಎಸ್. ಪ್ರತಿಮಾ ಹಾಸನ್ ರವರ ಹಾಸನದ ಬಹುಮುಖ ಪ್ರತಿಭೆ ಯಾದ ಇವರನ್ನು ಇನ್ನೂ ಹೆಚ್ಚಿನ ಕಾರ್ಯ ಸಾಧನೆಗಳನ್ನು ಮಾಡಲೆಂದು ಗುರುಗಳು ಆಶೀರ್ವದಿಸಿ ಗೌರವ ಸನ್ಮಾನಗಳನ್ನು ಮಾಡಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲಾಯಿತು.
(Visited 29 times, 1 visits today)