ತುಮಕೂರು


ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳನ್ನು ಆನ್‍ಲೈನ್ ಮೂಲಕ ದಾಖಲಿಸಲು ಚುನಾವಣಾ ಆಯೋಗವು ಛಿಗಿIಉIಐ ಅiಣizeಟಿ ಒobiಟe ಂಠಿಠಿ(ಸಿ-ವಿಜಿಲ್ ಆ್ಯಪ್) ತಂತ್ರಾಂಶವನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ಚುನಾವಣಾ ಅಕ್ರಮಗಳು ಕಂಡು ಬಂದರೆ ಕೂಡಲೇ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದಾಗಿದೆ.
100 ನಿಮಿಷಗಳಲ್ಲಿ ದೂರುಗಳ ಇತ್ಯರ್ಥಃ
ಸಿ-ವಿಜಿಲ್ ಆ್ಯಪ್ ಮೂಲಕ ದಾಖಲಾದ ಚುನಾವಣಾ ಅಕ್ರಮ ದೂರುಗಳನ್ನು ತ್ವರಿತಗತಿಯಲ್ಲಿ ಅಂದರೆ 100 ನಿಮಿಷಗಳ ಕಾಲಮಿತಿಯೊಳಗೆ ಇತ್ಯರ್ಥಪಡಿಸಲಾಗುವುದು. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಚಲಾಯಿಸುವಂತೆ ವಿವಿಧ ರೀತಿಯ ಆಮಿಷಗಳನ್ನು ನೀಡಬಹುದಾದ ಹಣ ವಿತರಣೆ, ಉಡುಗೊರೆ, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್‍ಗಳು/ಬ್ಯಾನರ್‍ಗಳ ಅಳವಡಿಕೆ, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಅನುಮತಿ ಇಲ್ಲದ ವಾಹನ ಅಥವಾ ಬೆಂಗಾವಲುಗಳು, ಆಸ್ತಿ ವಿರೂಪ, ಮತದಾನದ ದಿನದಂದು ಮತದಾರರ ಸಾಗಣೆ, ಮತಗಟ್ಟೆಯ 200 ಮೀ. ವ್ಯಾಪ್ತಿಯಲ್ಲಿ ಪ್ರಚಾರ, ನಿμÉೀಧಿತ ಅವಧಿಯಲ್ಲಿ ಪ್ರಚಾರ, ಧಾರ್ಮಿಕ ಅಥವಾ ಕೋಮು ಭಾಷಣ/ಸಂದೇಶಗಳು, ನಿಯಮ ಉಲ್ಲಂಘಿಸಿ ಧ್ವನಿವರ್ಧಕಗಳ ಬಳಕೆ, ಘೋಷಣೆ ಇಲ್ಲದೆ ಪೋಸ್ಟರ್ ಬಳಸುವುದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿರುವುದರಿಂದ ಇಂತಹ ಅಕ್ರಮಗಳು ಕಂಡು ಬಂದಾಗ ಸಾರ್ವಜನಿಕರು ಸಿ-ವಿಜಿಲ್ ಆ್ಯಪ್ ಮೂಲಕ ತಾವೇ ನೇರವಾಗಿ ದೂರು ನೀಡಬಹುದಾಗಿದೆ.
ಆ್ಯಪ್ ಡೌನ್‍ಲೋಡ್ ಮಾಡಿ-ದೂರು ದಾಖಲಿಸಿಃ
ಸಾರ್ವಜನಿಕರು ತಮ್ಮ ಅಂಡ್ರಾಯ್ಡ್ ಮೊಬೈಲ್‍ನಲ್ಲಿ ಪ್ಲೇ-ಸ್ಟೋರ್‍ನಿಂದ ಸಿ-ವಿಜಿಲ್ ಆ್ಯಪ್ ಅನ್ನು ಡೌನ್‍ಲೋಡ್ ಮಾಡಿಕೊಂಡು ಅತ್ಯಂತ ಸುಲಭ ರೀತಿಯಲ್ಲಿ ದೂರು ದಾಖಲಿಸಬಹುದಾಗಿದೆ. ಚುನಾವಣಾ ಅಕ್ರಮದ ಕುರಿತು ಛಾಯಾಚಿತ್ರ/ ವಿಡಿಯೋಗಳನ್ನೂ ಸಹ ಈ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಲು ಅವಕಾಶವಿದ್ದು, ದೂರು ನೀಡುವವರ ಹೆಸರು/ಮೊಬೈಲ್ ಸಂಖ್ಯೆಯನ್ನು ಗೌಪ್ಯವಾಗಿಡಲಾಗುವುದು.
ಸಿ-ವಿಜಿಲ್ ಆ್ಯಪ್ ಮೂಲಕ ಸಲ್ಲಿಸಿದ ದೂರುಗಳು ಸ್ವಯಂ ಸ್ಥಳವನ್ನು ತೋರಿಸುವ ಸೌಲಭ್ಯದೊಂದಿಗೆ ಪ್ರಕರಣ ನಡೆದ ನಿರ್ಧಿಷ್ಟ ಸ್ಥಳ ಮತ್ತು ಸಮಯದ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸಲಿವೆ.
ದಿನದ 24 ಗಂಟೆಗಳ ಕಾಲ ದೂರು ನಿರ್ವಹಣೆಃ
ಸಿ-ವಿಜಿಲ್‍ನಲ್ಲಿ ದಾಖಲಾಗುವ ದೂರುಗಳ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಹಿತ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ 24 ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸಲಿದ್ದಾರೆ. ದೂರುಗಳು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ ದೂರು ಬಂದ ಸ್ಥಳದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿ ರವಾನೆಯಾಗುತ್ತದೆ. ಸ್ವೀಕೃತ ಮಾಹಿತಿ ಆಧಾರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ದೂರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಿದೆ.
ಪೋಸ್ಟರ್/ಬ್ಯಾನರ್, ಉಡುಗೊರೆ/ ಕೂಪನ್, ಮದ್ಯ ಹಂಚಿಕೆ, ಅನುಮತಿ ಇಲ್ಲದೆ ವಾಹನ ಬಳಕೆ, ಮತ್ತಿತರ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಅಂದರೆ ಮಾರ್ಚ್ 29 ರಿಂದ ಏಪ್ರಿಲ್ 12ರವರೆಗೆ ಸಿ-ವಿಜಿಲ್ ಆ್ಯಪ್ ಮೂಲಕ ಒಟ್ಟು 35 ಸಾರ್ವಜನಿಕ ದೂರು ಪ್ರಕರಣಗಳು ದಾಖಲಾಗಿದ್ದು, ನಿಗಧಿತ ಅವಧಿಯೊಳಗೆ ದೂರು ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ಸಾರ್ವಜನಿಕರು ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಕೂಡಲೇ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸುವ ಮೂಲಕ ಪಾರದರ್ಶಕ ಚುನಾವಣೆ ನಡೆಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ ಜಂಟಿಯಾಗಿ ಮನವಿ ಮಾಡಿದ್ದಾರೆ.

(Visited 1 times, 1 visits today)