ತುಮಕೂರು

Hand casting vote in Electronic voting machine

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಮತಕ್ಷೇತ್ರಗಳಿಗೆ ಮೇ.10 ರಂದು ಮತದಾನ ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗದ ನಿಗಧಿಪಡಿಸಿರುವ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.
ಮತದಾನಕ್ಕೆ ಪರ್ಯಾಯ ಗುರುತಿನ ಚೀಟಿ ಅಥವಾ ದಾಖಲೆಗಳು:
ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್ ಕಾರ್ಡ್)ಯನ್ನು ಹಾಜರುಪಡಿಸಬೇಕು, ಒಂದು ವೇಳೆ ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಮತಗಟ್ಟೆಗೆ ಬರುವ ಮತದಾರರನ್ನು ಗುರುತಿಸುವುದಕ್ಕಾಗಿ ಕಡ್ಡಾಯವಾಗಿ ಹಾಜರು ಪಡಿಸಬಹುದಾಗಿದೆ.
ಆಧಾರ್ ಕಾರ್ಡ್, ಎಂಎನ್‍ಆರ್‍ಇಜಿಎ(ನರೇಗಾ) ಜಾಬ್ ಕಾರ್ಡ್, ಬ್ಯಾಂಕ್ ಹಾಗೂ ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಎನ್‍ಪಿಆರ್ ಅಡಿಯಲ್ಲಿ ಆರ್‍ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‍ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ, ಕೇಂದ್ರ ಸರ್ಕಾರದ ಹಾಗೂ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು.
ಹೆಸರು ಪರಿಶೀಲನೆಗೆ ಅಪ್ಲಿಕೇಷನ್:
ಮತದಾರರು ಮತದಾರರ ಯಾದಿಯಲ್ಲಿ ಹೆಸರು ದಾಖಲಿರುವ ಕುರಿತು ವೋಟರ್ ಹೆಲ್ಪ್‍ಲೈನ್ ಅಪ್ಲಿಕೇಷನ್ (ಗಿoಣeಡಿ ಊeಟಠಿಟiಟಿe ಂಠಿಠಿ) ತಿತಿತಿ.ಟಿvsಠಿ.iಟಿ ತಿebsiಣe ಮೂಲಕ ಹಾಗೂ ಆಯಾ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿರುವ ಮತದಾರರ ಯಾದಿಯನ್ನು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ.
ಜಿಲ್ಲೆಯ ಎಲ್ಲ ಒಟ್ಟು 22,47,932 ಜನ ಮತದಾರರು, ಮೇ 10ರ ಮತದಾನದ ದಿನದಂದು ತಪ್ಪದೇ ಮತದಾನ ಮಾಡಲು ಜಿಲ್ಲಾ ಚುನವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮನವಿ ಮಾಡಿದ್ದಾರೆ.

(Visited 1 times, 1 visits today)