ಬೆಂಗಳೂರು
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಲಕ್ಷಾಂತರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಮಾರಂಭದಲ್ಲಿ ಭಾಗಿಯಾಗಿದ್ದು, ತಮ್ಮ ನಾಯಕರಿಗೆ ಶುಭಕೋರಿದ್ದಾರೆ.
ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದ್ದರು. ೧೦ ಮಂದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಹಲವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಕೆಲವರು ಸಂವಿಧಾನ, ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ವಚನ
ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆAದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿAದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು `ದೇವರ ಹೆಸರಿನಲ್ಲಿ ಪ್ರಮಾಣ’ ಮಾಡುತ್ತೇನೆ ಎಂದು ಹೇಳಿದ್ದಾರೆ. ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ
ನಾನು ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆAದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿAದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ
ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು `ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ’ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ದೃಡೀಕರಣ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸಚಿವರ ಪ್ರಮಾಣವಚನ
ಸಚಿವ ಸತೀಶ್ ಜಾರಕಿಹೊಳಿಯವರು `ಬುದ್ಧ, ಬಸವ, ಅಂಬೇಡ್ಕರ್’ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಾ.ಜಿ ಪರಮೇಶ್ವರ್‌ರವರು `ಸಂವಿಧಾನ`ದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಜಮೀರ್ ಅಹಮದ್ ಖಾನ್ ಅವರು ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದರು.