ತುಮಕೂರು
ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ಗೌಡ ಅವರು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಲಮಲಾನಂದನಾಥ ಮಹಾ ಸ್ವಾಮೀಜಿಯವರು ಶಾಸಕ ಸುರೇಶ್ಗೌಡ ಅವರಿಗೆ ಆಶೀರ್ವದಿಸಿ, ಕ್ಷೇತ್ರದಲ್ಲಿ ಶಿಕ್ಷಣ, ಮೂಲಭೂತ ಸೌಕರ್ಯ ಸೇರಿದಂತೆ ಕ್ಷೇತ್ರದ ಜನರ ಸಂಕಷ್ಟ, ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೆಲಸ ಮಾಡುವಂತೆ ಸಲಹೆ ನೀಡಿದರು.
ಶ್ರೀಗಳ ಸಲಹೆಯಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದ ಶಾಸಕ ಸುರೇಶ್ಗೌಡ ಅವರು, ಈಗಾಗಲೇ ಈ ಹಿಂದೆ ನಾನು ಶಾಸಕನಾಗಿದ್ದಾಗ ಕ್ಷೇತ್ರದಲ್ಲಿ ಮಾದರಿ ಶಾಲೆಗಳು, ರಸ್ತೆ, ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ಮಾಡಿದ್ದೇನೆ. ಈ ಕಾರ್ಯಗಳನ್ನು ಮುಂದುವರೆಸುವ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದನಾಗಿ ಹಗಲಿರುಳು ಕೆಲಸ ಮಾಡುತ್ತೇನೆ ಎಂದು ಶ್ರೀಗಳಿಗೆ ತಿಳಿಸಿದರು.
(Visited 1 times, 1 visits today)