ತುಮಕೂರು:


ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆ ಕೌಶಲ್ಯವನ್ನು ರೂಢಿಸಿಕೊಳ್ಳುವುದರ ಮೂಲಕ ಮಾನಸಿಕವಾಗಿ ನಮಗೆ ಯಾವ ಕ್ಷೇತ್ರದಲ್ಲಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂಬುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ ಅಭಿಪ್ರಾಯಪಟ್ಟರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಸೆಂಟ್ರಲ್ ತುಮಕೂರು ಇವರ ಸಹಯೋಗದೊಂದಿಗೆ ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಬ್ಲಡ್ ಗ್ರೂಪಿಂಗ್ ಹಾಗೂ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಲಡ್ ಗ್ರೂಪಿಂಗ್ ಮಾಡಿಸಿಕೊಳ್ಳಬೇಕು. ಅಪಘಾತ, ಯಾವುದೇ ವ್ಯಕ್ತಿಗಳಿಗೆ ತುರ್ತಾಗಿ ರಕ್ತದಾನ ಮಾಡಬೇಕಾದರೆ ಮೊದಲು ತಮ್ಮ ರಕ್ತದ ಗುಂಪನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಪದವಿ ಮುಗಿಸಿದ ವಿದ್ಯಾರ್ಥಿಗಳು ಉದ್ದಿಮೆ ಸ್ಥಾಪಿಸುವ ಗುರಿಯನ್ನು ಹೊಂದಿದ್ದಲ್ಲಿ ಸಿಡಾಕ್ ಸಂಸ್ಥೆ ಉದ್ದಿಮೆ ಸ್ಥಾಪಿಸಲು ರೂಪುರೇಷೆ ಸಿದ್ದಪಡಿಸುವುದರ ಕುರಿತು ೨೧ ದಿನಗಳ ತರಬೇತಿ ನೀಡುವುದರ ಜೊತೆಗೆ ಅದಕ್ಕೆ ಬೇಕಾದ ಎಲ್ಲಾ ಮಾಹಿತಿಗಳನ್ನು ಈ ಸಂಸ್ಥೆಯಿAದ ನೀಡಲಾಗುವುದು ಎಂದು ತಿಳಿಸಿದರು.
ಸ್ಕಿಲ್ ಕನೆಕ್ಟ್ ಪೋರ್ಟಲ್‌ನಲ್ಲಿ ಮೊದಲು ಎಲ್ಲರೂ ತಮ್ಮ ಶಿಕ್ಷಣದ ವಿವರಗಳನ್ನು ನೋಂದಣಿ ಮಾಡಿಕೊಳ್ಳಬೇಕು ಹಾಗೂ ಯಾವ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆ ಎಂಬುವುದರ ಕುರಿತು ಒಂದು ನಿಮಿಷದ ವಿಡಿಯೋ ತುಣುಕನ್ನು ಆಪ್‌ಲೋಡ್ ಮಾಡಬೇಕು ಎಂದು ತಿಳಿಸಿದರು. ರೋಟರಿ-೩೧೯೨ರ ನಿರ್ದೇಶಕ ಬಿಳಿಗೆರೆ ಶಿವಕುಮಾರ್ ಮಾತನಾಡಿ, ಹೃದಯ ಸಂಬAಧಿ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಉಚಿತವಾಗಿ ರೋಟರಿ ಕಡೆಯಿಮದ ಹೃದಯ ಶಸ್ತç ಚಿಕಿತ್ಸೆಯನ್ನು ಮಾಡಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಟಿ.ಆರ್. ಲೀಲಾವತಿ ಅವರು, ವಿದ್ಯಾರ್ಥಿಗಳು ಮೊದಲು ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕು ಇಲ್ಲವಾದರೆ ನಿಮ್ಮ ಗುರಿಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ತಿಪ್ಪೇಸ್ವಾಮಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ನಿರ್ದೇಶಕ ವಿಶ್ವೇಶ್ವರಯ್ಯ, ರೋಟರಿ ಸೆಂಟ್ರಲ್ ಅಧ್ಯಕ್ಷ ರಾಮ ಶೇಷಗಿರಿರಾವ್, ಬೆಳ್ಳಿ ಬ್ಲಡ್ ಬ್ಲಾಂಕ್ ಅಧ್ಯಕ್ಷ ಬೆಳ್ಳಿ ಲೋಕೇಶ್, ಪ್ರಾಧ್ಯಾಪಕ ಪ್ರೊ. ಸಿ.ಆರ್. ಮನೋಜ್, ರೇಣುಕ ಉಪಸ್ಥಿತರಿದ್ದರು.

(Visited 1 times, 1 visits today)