ಪಾವಗಡ
ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಭಿಮಾನಿಗಳ ಮಹಾವೇದಿಕೆ ಪಾವಗಡ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು ಶ್ರೀ ಶಿವಕುಮಾರ ಸ್ವಾಮಿಗಳು ಮತ್ತು ಡಾ.ಅಬ್ದುಲ್ ಕಲಾಂ ಇಬ್ಬರೂ ವಿದ್ಯಾರ್ಥಿಗಳ ಬೆನ್ನು ತಟ್ಟಿದವರು, ಅವರ ಹೆಸರಿನಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವ ಈ ಮಹಾ ವೇದಿಕೆಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿ, ಸಾಧನೆಯ ಹಾದಿ ಸುಗಮವಲ್ಲ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ.ಆದರೆ ಆಗಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾರ್ಯ. ಇವೆರಡರ ನಡುವೆ ಸಾಮಾಜಿಕ ಜವಾಬ್ದಾರಿಯ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಹೋದರೆ ಮಾತ್ರ ಯಶಸ್ಸು ನಿಶ್ಚಿತ. ಎಲ್ಲಾ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ್ ಆಗಲು ಬಯಸುತ್ತಾರೆ, ಯಾರೂ ಶಿಕ್ಷಕರಾಗಲು ಬಯಸುತ್ತಿಲ್ಲ, ಪಾವಗಡ ತಾಲೂಕಿನಲ್ಲಿ ಐ.ಎ.ಸ್ ಅಧಿಕಾರಿಗಳು ಯಾರು ಆಗಿಲ್ಲವೇನೋ ನಿಮ್ಮಲ್ಲಿ ಯಾರಾದರೂ ಐ.ಎ.ಎಸ್ ಅಧಿಕಾರಿಗಳಾಗಿ ನಿಮ್ಮ ತಾಲೂಕಿನ ಘನತೆಯನ್ನು ಹೆಚ್ಚಿಸಬೇಕು ಎಂದು ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಸಚಿವರಾದ ವೆಂಕಟರಮಣಪ್ಪ ರವರು ಮಾತನಾಡುತ್ತಾ ಮಾಡುವ ಕೆಲಸದಲ್ಲಿ ಶ್ರದ್ಧೆ,ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಅದರ ಜೊತೆಗೆ ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು.
ನಮ್ಮ ತಾಲೂಕಿನಲ್ಲಿ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಗಳಿಸಿ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು. ಎಂದು ಹೇಳಿದರು.