ತುಮಕೂರು


ತಾವು ಮಾಡುವ ಸಾಮಾಜಿಕ ಕಾರ್ಯ ಇತರರಿಗೆ ಪ್ರೇರಣೆಯಾಗಬೇಕು ಹಾಗೂ ಮಾದರಿಯಾಗಬೇಕು ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ದೀರಾನಂದ ಜೀ ಮಹಾರಾಜ್ ಅಭಿಪ್ರಾಯಪಟ್ಟರು.
ಶ್ರೀ ಸಿದ್ಧಾರ್ಥ ವ್ಯವಹಾರ ಅಧ್ಯಯನ ಕೇಂದ್ರದ ಸಾಮಾಜ ಕಾರ್ಯ ವಿಭಾಗದ ವತಿಯಿಂದ ಹೋಬಳಿಯ ಕಾಟೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜ ಕಾರ್ಯದ ನಡೆ ಮಾದರಿ ಗ್ರಾಮದ ಕಡೆ ಎಂಬ ೭ ದಿನಗಳ ಸಮಾಜ ಕಾರ್ಯ ಗ್ರಾಮೀಣ ಶಿಬಿರಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಈ ಶಿಬಿರದ ಉದ್ದೇಶದಂತೆ ಗ್ರಾಮವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ನಾಗರಿಕರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು, ಗ್ರಾಮೀಣ ಭಾಗದಲ್ಲಿ ಕಂಡು ಬರುವ ಅನೈರ್ಮಲ್ಯ, ಅನಿಷ್ಟ ಪದ್ಧತಿ, ಮೌಢ್ಯ ತೊರೆಯುವಂತೆ ಅರಿವು ಮೂಡಿಸಬೇಕು ಎಂದರು.
ಸ್ವಾಮಿ ವಿವೇಕಾನಂದರು ಹೇಳಿದಂತೆ ಯುವ ಸಮುದಾಯ ಜಾಗೃತವಾಗಬೇಕು, ಸಮಾಜದ ಅಂಕುಡೊAಕುಗಳನ್ನು ತಿದ್ದುವುದರ ಜೊತೆಗೆ ಕೇವಲ ಲಾಭ-ನಷ್ಟದ ಲೆಕ್ಕಾಚಾರ ಮಾಡದೇ ಎಲ್ಲರೂ ಸಾಮಾಜಿಕ ಬದ್ಧತೆಯೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿವು ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಎಸ್‌ಐಬಿಎಂನ ಪ್ರಾಂಶುಪಾಲರಾದ ಡಾ.ಮಮತಾ ಮಾತನಾಡುತ್ತಾ ಗ್ರಾಮೀಣ ಶಿಬಿರ, ಕ್ಷೇತ್ರ ಭೇಟಿ ಸಮಾಜ ಕಾರ್ಯ ವಿಭಾಗದ ಅಧ್ಯಯನ ವಿಷಯವಾಗಿದ್ದು, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾಡಬೇಕಾದ ಕೆಲಸಗಳಿಗೆ ಅಗತ್ಯವಾಗಿ ಯಾವ ರೀತಿ ಮಾಹಿತಿ ಸಂಗ್ರಹಿಸಬೇಕು, ಸಂಘಟಿಸಬೇಕು, ಎದುರಾಗುವ ಸವಾಲುಗಳೇನು ಎನ್ನುವುದನ್ನು ಈ ಶಿಬಿರದಲ್ಲಿ ಕಲಿಯಬೇಕು ಎಂದರು.
ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಗುರುಪ್ರಸಾದ್, ಶಿಬಿರದ ಅಧಿಕಾರಿಗಳಾದ ರಘು, ಸಹಾಯಕ ಶಿಬಿರಾಧಿಕಾರಿಗಳಾದ ರಾಜು, ಶ್ವೇತ, ಸಾಮಾಜ ಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು, ಊರಿನ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಮತ್ತು ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು, ಶಿಬಿರದಲ್ಲಿ ಚರ್ಮ, ಸ್ತಿçÃರೋಗ, ಇಎನ್‌ಟಿ, ನೇತ್ರಶಾಸ್ತç, ಮಕ್ಕಳ, ಸಾಮಾನ್ಯ ಔಷಧ, ಶಸ್ತçಚಿಕಿತ್ಸೆ, ಮೂಳೆ, ದಂತ, ಬಿಪಿ ಮತ್ತು ಶುಗರ್ ವೈದ್ಯರು ಭಾಗವಹಿಸಿ ತಪಾಸಣೆ ನಡೆಸುವುದರ ಜೊತೆಗೆ ಉಚಿತವಾಗಿ ಔಷಧಿ ವಿತರಣೆ ಮಾಡಿದರು. ೧೧೦ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.

(Visited 1 times, 1 visits today)